ಕರ್ನಾಟಕ

karnataka

ETV Bharat / bharat

ಕೋವಿಡ್​ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ... ಯಾವ ರಾಜ್ಯದಲ್ಲಿ? - media persons

ಉತ್ತರ ಪ್ರದೇಶ, ಒಡಿಶಾ ಬಳಿಕ ಇದೀಗ ಛತ್ತೀಸ್​ಗಢ ಸರ್ಕಾರವು ಕೋವಿಡ್​ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಮುಂದಾಗಿದೆ.

ಕೋವಿಡ್​ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ
ಕೋವಿಡ್​ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ

By

Published : May 31, 2021, 2:07 PM IST

ರಾಯ್​ಪುರ್ (ಛತ್ತೀಸ್​ಗಢ): ಕೊರೊನಾ ಸೋಂಕು ತಗುಲಿ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಛತ್ತೀಸ್​ಗಢ ಸರ್ಕಾರ ಘೋಷಿಸಿದೆ. ಅಲ್ಲದೇ 'ಛತ್ತೀಸ್​ಗಢ ಮಾಧ್ಯಮ ಪ್ರತಿನಿಧಿ ಕಲ್ಯಾಣ ನೆರವು' ನಿಯಮಗಳ ಅಡಿಯಲ್ಲಿ ಕೋವಿಡ್​ನಿಂದ ದಾಖಲಾದ ಪತ್ರಕರ್ತರ ಆಸ್ಪತ್ರೆಯ ವೆಚ್ಚವನ್ನೂ ಭರಿಸುವುದಾಗಿ ಸರ್ಕಾರ ತಿಳಿಸಿದೆ.

ಛತ್ತೀಸ್​ಗಢದಲ್ಲಿ ಕೊರೊನಾದಿಂದಾಗಿ ಒಟ್ಟು 30 ಮಾಧ್ಯಮ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ಮೃತ ಪತ್ರಕರ್ತರ ಕುಟುಂಬಗಳಿಗೆ ಆಯಾ ಜಿಲ್ಲೆಗಳಲ್ಲಿನ ಸಾರ್ವಜನಿಕ ಸಂಪರ್ಕ ಕಚೇರಿಗಳಿಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ಇದನ್ನೂ ಓದಿ: ಕೋವಿಡ್​ನಿಂದ 67 ಪತ್ರಕರ್ತರ ಸಾವು: ಆರ್ಥಿಕ ನೆರವು ನೀಡಲು ಕೇಂದ್ರ ಒಪ್ಪಿಗೆ

ಕೊರೊನಾ ಸಾಂಕ್ರಾಮಿಕದ ಆರಂಭದಿಂದಲೂ ಕೋವಿಡ್, ಲಾಕ್​ಡೌನ್​ ​ಕುರಿತ ನಿಖರ ಮಾಹಿತಿಯನ್ನು ಜನರಿಗೆ ತಲುಪಿಸುವ, ಜಾಗೃತಿ ಮೂಡಿಸುವ ಕಾರ್ಯವನ್ನು ಪತ್ರಕರ್ತರೂ ಮಾಡುತ್ತಾ ಬಂದಿದ್ದಾರೆ. ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು, ಒಡಿಶಾ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳು ಪತ್ರಕರ್ತರನ್ನು ಕೋವಿಡ್​ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಕಾರ್ಮಿಕರು ಎಂದು ಘೋಷಿಸಿವೆ.

ಕೋವಿಡ್​ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಈಗಾಗಲೇ ಉತ್ತರ ಪ್ರದೇಶ ಸರ್ಕಾರವು 10 ಲಕ್ಷ ರೂ. ಹಾಗೂ ಒಡಿಶಾ ರಾಜ್ಯವು 15 ಲಕ್ಷ ರೂ. ಆರ್ಥಿಕ ನೆರವನ್ನು ಘೋಷಿಸಿವೆ.

ABOUT THE AUTHOR

...view details