ರಾಯ್‌ಪುರ (ಛತ್ತೀಸ್‌ಗಢ): ರೈತರು, ಕಾರ್ಮಿಕರು ಮತ್ತು ಬಡವರಿಗೆ ಸಹಾಯ ಮಾಡುವಲ್ಲಿ ಛತ್ತೀಸ್‌ಗಢ ಸರ್ಕಾರ ಮುಂಚೂಣಿಯಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಭೂಪೇಶ್ ಬಾಗೇಲ್ ಸರ್ಕಾರವು ನಾಗರಿಕರ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಮಾಜದ ಪ್ರತಿಯೊಂದು ವರ್ಗದವರಿಗೆ ನ್ಯಾಯ ದೊರಕಿಸುವಲ್ಲಿ ಉತ್ತಮವಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಛತ್ತೀಸ್‌ಗಢ ಸರ್ಕಾರವು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ ಎಂದು ರಾಹುಲ್ ಗಾಂಧಿ ರಾಯ್‌ಪುರದ ಮುಖ್ಯಮಂತ್ರಿ ಬಾಗೇಲ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ಈ ರೀತಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಾಗೇಲ್, ರಾಜೀವ್ ಗಾಂಧಿ ಕಿಸಾನ್ ನ್ಯಾಯ್ ಯೋಜನೆ ಅಡಿಯಲ್ಲಿ 19 ಲಕ್ಷ ಫಲಾನುಭವಿಗಳ ಖಾತೆಗೆ ಒಟ್ಟು 1,104 ಕೋಟಿ, 27 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದರು. ಒಟ್ಟಾರೆಯಾಗಿ ಈ ಯೋಜನೆ ಅಡಿಯಲ್ಲಿ 5,628 ಕೋಟಿ ರೂ. ಹಣವನ್ನು ರೈತರಿಗೆ ನೀಡಲಾಗಿದೆ.