ಹೈದರಾಬಾದ್: ಛತ್ತೀಸ್ಗಢದ ಮೂಲದ 45 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್ನಲ್ಲಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೈದರಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಗುರುವಾರ ರಾತ್ರಿ ದಿಲ್ಸುಖ್ನಗರ ಮೆಟ್ರೋ ನಿಲ್ದಾಣದ ಮೊದಲ ಮಹಡಿಯಿಂದ ಜಿಗಿದಿದ್ದು, ಆತನಿಗೆ ಗಂಭೀರ ಗಾಯಗಳಾಗಿದ್ದವು. ಆತನನ್ನು ತಕ್ಷಣ ಒಸ್ಮಾನಿಯಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯ ಕೋವಕೊಂಡ ನಿವಾಸಿ ಭೀಮಾ ಎಂದು ಗುರುತಿಸಲಾಗಿದೆ. ಆತ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಪೊಲೀಸರು ಶಂಕಿಸಿದ್ದು, ಆತನ ಮೆಟ್ರೋ ನಿಲ್ದಾಣದಲ್ಲಿ ಅಲೆದಾಡುತ್ತಿದ್ದನು ಎಂದು ತಿಳಿದು ಬಂದಿದೆ. ಮಲಕ್ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಹೊಳೆ ದಾಟುವ ವೇಳೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ-ಮಗ: ವಿಡಿಯೋ