ಛತ್ತೀಸ್‌ಗಢ/ನವದೆಹಲಿ :ಛತ್ತೀಸ್‌ಗಢದಲ್ಲಿ ನಡೆದ ನಕ್ಸಲರ ದಾಳಿಯಲ್ಲಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿರುವುದಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಾವೋವಾದಿಗಳ ವಿರುದ್ಧದ ಹೋರಾಟದಲ್ಲಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿರುವುದು ತೀವ್ರ ದುಃಖದ ಸಂಗತಿಯಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಾಂತ್ವನಗಳು. ರಾಷ್ಟ್ರವು ಅವರ ನೋವನ್ನು ಹಂಚಿಕೊಳ್ಳುತ್ತದೆ ಮತ್ತು ಈ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಸುಕ್ಮಾ-ಬಿಜಾಪುರ ಗಡಿಯಲ್ಲಿ ಎಡಪಂಥೀಯ ಉಗ್ರಗಾಮಿಗಳ ವಿರುದ್ಧ ಹೋರಾಡುವಾಗ ಕೊಲ್ಲಲ್ಪಟ್ಟ ನಮ್ಮ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗೆ ನನ್ನ ನಮನ. ಅವರು ಅತ್ಯಂತ ಧೈರ್ಯದಿಂದ ಹೋರಾಡಿದ್ದು, ಅವರ ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬಗಳಿಗೆ ಸಾಂತ್ವನ ತಿಳಿಸುವೆ ಎಂದಿದ್ದಾರೆ.