ದಂತೇವಾಡ: ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಯ ಗುಂಡೇಟಿಗೆ ಮೋಸ್ಟ್ ವಾಂಟೆಡ್ ಮಹಿಳಾ ನಕ್ಸಲ್ಳನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಂತೇವಾಡದ ಗೀದಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗುಮಾಲ್ನರ್ ಗ್ರಾಮದ ಬಳಿ ಭದ್ರತಾ ಪಡೆಯು ನಕ್ಸಲ್ ವಿರೋಧಿ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ಇಂದು ಬೆಳಗ್ಗೆ 6.30 ರ ಸುಮಾರಿಗೆ ನಕ್ಸಲರು ಗುಂಡು ಹಾರಿಸಿದ್ದಾರೆ. ಈ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಮಹಿಳಾ ನಕ್ಸಲ್ ವೈಕೊ ಪೆಕ್ಕೊ (24)ಳನ್ನು ಹೊಡೆದುರುಳಿಸಲಾಗಿದೆ. ಉಳಿದ ನಕ್ಸಲರು ಪರಾರಿಯಾಗಿದ್ದಾರೆ.