ಮುಂಬೈ: ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ಗೆ ಕೋವಿಡ್ ದೃಢಪಟ್ಟಿದ್ದು ತಿಹಾರ್ ಜೈಲಿನ ಅಧಿಕಾರಿಗಳು ಏಮ್ಸ್ಗೆ ದಾಖಲಿಸಿದ್ದಾರೆ.
61 ವರ್ಷದ ರಾಜನ್‌ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ನಂತರ ಆತನನ್ನು ಬಂಧಿಸಿ ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.
ಸೋಮವಾರ, ತಿಹಾರ್ ಜೈಲಿನ ಸಹಾಯಕ ಜೈಲರ್ ದೂರವಾಣಿ ಮೂಲಕ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ಪ್ರಕರಣದ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.