ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 10,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯಸಭೆಗೆ ತಿಳಿಸಿದ ಒಂದು ದಿನದ ನಂತರ ಅಂದರೆ ಇಂದು, ಅದು ಸರ್ಕಾರದ ಉಡುಗೊರೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಚಿದಂಬರಂ, "ಮೋದಿ ಸರ್ಕಾರದಿಂದ ಮತ್ತೊಂದು ವರ್ಷಾಂತ್ಯದ ಉಡುಗೊರೆ: ಕೇಂದ್ರೀಯ ವಿಶ್ವವಿದ್ಯಾಲಯಗಳು, ಐಐಟಿಗಳು ಮತ್ತು ಐಐಎಂಗಳಲ್ಲಿ 10,000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 4,126 ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ಮೀಸಲಿಡಲಾಗಿದೆ" ಎಂದು ಹೇಳಿದ್ದಾರೆ.