ನವದೆಹಲಿ:ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಮತ್ತು ಆರ್ಮಿ ಚೀಫ್ ಜನರಲ್ ಎಂ.ಎಂ. ನರವಣೆ ಅವರು ಸಂಸತ್ನಿಂದ ನಿರ್ಗಮಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ರಾಜ್ಯಸಭೆಯಲ್ಲಿ ಪೂರ್ವ ಲಡಾಖ್ನ ಪ್ರಸ್ತುತ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ್ದು, ಇದಾದ ಬಳಿಕ ರಕ್ಷಣಾ ಪಡೆ ಮುಖ್ಯಸ್ಥ ರಾವತ್ ಹಾಗೂ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅಲ್ಲಿಂದ ತೆರಳಿದ್ದಾರೆ.
ರಾಜ್ಯಸಭಾ ಕಲಾಪದಲ್ಲಿ ಮಾತನಾಡುತ್ತಿರುವ ರಾಜನಾಥ್ ಸಿಂಗ್, ಪೂರ್ವ ಲಡಾಖ್ನಲ್ಲಿನ ಪ್ರಸ್ತುತ ಪರಿಸ್ಥಿತಿ ಕುರಿತು ಹೇಳಿಕೆ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಶಾಂತಿ ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಭಾರತ ಎಂದಿಗೂ ದ್ವಿಪಕ್ಷೀಯ ಸಂಬಂಧವನ್ನು ಕಾಪಾಡಿಕೊಳ್ಳಲು ಒತ್ತು ನೀಡಿದೆ.