ಕರ್ನಾಟಕ

karnataka

ETV Bharat / bharat

ಹೆಲಿಕಾಪ್ಟರ್ ಪತನದಲ್ಲಿ ಬಿಪಿನ್​​ ರಾವತ್​ ನಿಧನ: ಶುಕ್ರವಾರ ಅಂತ್ಯಕ್ರಿಯೆ

ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಮರಣ ಹೊಂದಿರುವ ಬಿಪಿನ್​ ರಾವತ್​ ಅವರ ಪಾರ್ಥಿವ ಶರೀರ ನಾಳೆ ದೆಹಲಿಗೆ ಬರಲಿದ್ದು, ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

CDS Gen Bipin Rawat dies
CDS Gen Bipin Rawat dies

By

Published : Dec 8, 2021, 10:03 PM IST

ನವದೆಹಲಿ:ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್​ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್​ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ​​ ಅವರ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ತಿಳಿದು ಬಂದಿದೆ.

ಹೆಲಿಕಾಪ್ಟರ್​ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಸೇರಿದಂತೆ 13 ಮಂದಿಯ ಪಾರ್ಥಿವ ಶರೀರ ನಾಳೆ ದೆಹಲಿಗೆ ಆಗಮಿಸಲಿದ್ದು, ಸೇನಾ ವಿಧಿ ವಿಧಾನಗಳಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ.

ವಿಶೇಷ ಸೇನಾ ವಿಮಾನದಲ್ಲಿ ಪಾರ್ಥಿವ ಶರೀರಗಳು ದೆಹಲಿಗೆ ಬರಲಿವೆ. ಇದಾದ ಬಳಿ ಎಲ್ಲರ ಮೃತದೇಹ ಆಯಾ ರಾಜ್ಯಗಳಿಗೆ ರವಾನೆಯಾಗಲಿವೆ. ಇನ್ನು ಬಿಪಿನ್​ ರಾವತ್​ ಹಾಗೂ ಅವರ ಪತ್ನಿ ಮಧುಲಿಕಾ ಮೃತದೇಹವನ್ನ ಅವರ ಮನೆಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಇದಾದ ಬಳಿಕ ದೆಹಲಿಯ ಕಂಟೋನ್ಮೆಂಟ್​​ನಲ್ಲಿ ಅಂತಿಮ ದರ್ಶನಕ್ಕೆ ಇಟ್ಟು, ಶುಕ್ರವಾರ ಸ್ಕ್ವೇರ್​​​ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿರಿ:ಅತ್ಯುತ್ತಮ ಸೈನಿಕ, ನಿಜವಾದ ದೇಶಭಕ್ತ, ಧೀರ ಪುತ್ರ ರಾವತ್​​​​​ ನಿಧನಕ್ಕೆ ಮೋದಿ ಸೇರಿ ಅನೇಕರ ಸಂತಾಪ

ಸೇನಾ ಮುಖಂಡ ರಾವತ್​​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದು, ಉತ್ತರಾಖಂಡದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಸೇನಾ ವಿಮಾನ ಪತನದ ವಿಚಾರವಾಗಿ ಕೇಂದ್ರ ರಕ್ಷಣಾ ಸಚಿವ ಈಗಾಗಲೇ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ನಾಳೆ ಸಂಸತ್​​ನಲ್ಲಿ ಮಾಹಿತಿ ನೀಡುವ ಸಾಧ್ಯತೆ ದಟ್ಟವಾಗಿದೆ.

ABOUT THE AUTHOR

...view details