ನವದೆಹಲಿ:ಚೀನಾದಲ್ಲಿ ವಿಮಾನ ಪತನಗೊಂಡು ಭೀತಿ ಸೃಷ್ಟಿಸಿರುವ ಬೆನ್ನಲ್ಲೇ ಭಾರತೀಯ ವಿಮಾನಯಾನ ಸಂಸ್ಥೆಗಳು ಎಚ್ಚರಿಕೆ ವಹಿಸಿವೆ. ಎಲ್ಲಾ ವಿಮಾನಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಜಿಸಿಎ ಮುಖ್ಯಸ್ಥ ಅರುಣ್ಕುಮಾರ್, 132 ಜನರಿದ್ದ ಚೀನಾದ ಈಸ್ಟರ್ನ್ ಏರ್ಲೈನ್ಸ್ ವಿಮಾನ ಪತನಗೊಂಡು ಆತಂಕ ಸೃಷ್ಟಿಸಿದೆ. ಹೀಗಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳಾದ ಸ್ಪೈಸ್‌ಜೆಟ್, ವಿಸ್ತಾರಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ವಿಮಾನ ಸುರಕ್ಷತೆಯು ಗಂಭೀರ ವ್ಯವಹಾರವಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಮ್ಮ ಬೋಯಿಂಗ್ 737 ಸರಣಿಯ ವಿಮಾನಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದಿದ್ದಾರೆ.
ಪತನಗೊಂಡ ಚೀನಾದ ವಿಮಾನದಲ್ಲಿ 132 ಜನರಲ್ಲಿ 123 ಪ್ರಯಾಣಿಕರು ಮತ್ತು 9 ಸಿಬ್ಬಂದಿ ಇದ್ದರು. ಯಾವುದೇ ವಿದೇಶಿ ಪ್ರಯಾಣಿಕರು ಇರಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ದುರ್ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಳವಳ ವ್ಯಕ್ತಪಡಿಸಿದ್ದಾರೆ.
ಓದಿ:ನೋಯ್ಡಾದಲ್ಲಿ ದೇಗುಲಕ್ಕೆ ನುಗ್ಗಿ ಶಿವಲಿಂಗ ವಿರೂಪ: ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ