ಕರ್ನಾಟಕ

karnataka

ETV Bharat / bharat

ಭಾರತೀಯ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರು ಯೋಧರು ಹುತಾತ್ಮ - ಉದಂಪುರ್​​​ನ ಡಿಐಜಿ ರಿಯಾಸಿ ರಂಘೆ ಸುಲೇಮಾನ್

ಉದಂಪೂರ್​ನಲ್ಲಿ ಹೆಲಿಕಾಪ್ಟರ್​​ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ವರದಿಯಂತೆ ಹೆಲಿಕಾಪ್ಟರ್ ಭಾರತೀಯ ಸೇನೆಗೆ ಸಂಬಂಧಿಸಿದ್ದಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ಮಾಹಿತಿ ನೀಡಿದೆ.

chopper-crashes-in-j-and-ks-udhampur-district
ಭಾರತೀಯ ಸೇನಾ ಹೆಲಿಕಾಪ್ಟರ್ ಪತನ

By

Published : Sep 21, 2021, 1:50 PM IST

Updated : Sep 21, 2021, 5:20 PM IST

ಉದಂಪೂರ್ (ಜಮ್ಮು ಕಾಶ್ಮೀರ): ಇಲ್ಲಿನ ಉದಂಪೂರ್ ಜಿಲ್ಲೆಯ ಶಿರ್​​ಘರ್​​ಧರ್ ಪ್ರದೇಶದಲ್ಲಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಹೆಲಿಕಾಪ್ಟರ್​ ಪತನಗೊಂಡ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದರು. ತಕ್ಷಣವೇ ರಕ್ಷಣಾ ಪಡೆ ಸ್ಥಳಕ್ಕೆ ಧಾವಿಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸೇನಾ ಪೈಲಟ್​​ಗಳನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಇದೀಗ ಇಬ್ಬರೂ ಪೈಲಟ್​ಗಳು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ಭಾರತೀಯ ಸೇನಾ ಹೆಲಿಕಾಪ್ಟರ್ ಪತನ

ಹುತಾತ್ಮರಾದ ಯೋಧರನ್ನು ಮೇಜರ್ ರೋಹಿತ್ ಕುಮಾರ್ ಮತ್ತು ಮೇಜರ್ ಅನುಜ್ ರಜಪೂತ್ ಎಂದು ಗುರುತಿಸಲಾಗಿದೆ. ಹುತಾತ್ಮ ಯೋಧರಿಗೆ ಭಾರತೀಯ ಸೇನೆ ಸಂತಾಪ ಸೂಚಿಸಿದೆ.

Last Updated : Sep 21, 2021, 5:20 PM IST

ABOUT THE AUTHOR

...view details