ಚಂದೌಲಿ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ನಡೆಸಲು ಬಂದಿದ್ದ ಸಿಐಎಸ್‌ಎಫ್ ಯೋಧ ಸೋಮವಾರ ಚುನಾವಣಾ ಕರ್ತವ್ಯದ ವೇಳೆ ಮೃತಪಟ್ಟಿದ್ದಾರೆ. ಕರ್ತವ್ಯದಲ್ಲಿದ್ದಾಗ ಯೋಧನ ಆರೋಗ್ಯ ಹಠಾತ್ ಹದಗೆಟ್ಟಿದ್ದು, ನಂತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿ ಇರಿಸಲಾಗಿದೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಲಿ ಗ್ರಾಮದ ನಿವಾಸಿ ಸಿಐಎಸ್‌ಎಫ್ ಯೋಧ ನವಂತ್ ಅಪ್ಪಾಸಾಹೇಬ ದೀವಾಟೆ (43) ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು. ಮೊಘಲ್ಸರಾಯ್ ಸಭೆಯಲ್ಲಿ ಅವರ ಕರ್ತವ್ಯ ನಿರತವಾಗಿತ್ತು. ಸೋಮವಾರ ಸಂಜೆ ಅವರ ಆರೋಗ್ಯ ಹಠಾತ್ ಹದಗೆಟ್ಟಿದ್ದು, ಕೂಡಲೇ ಅವರನ್ನು ವಾಹನದ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.