ಚಂಡೀಗಢ: ಪಂಜಾಬ್ ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕರ್ನಾಟಕದ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಮೂಲದ ನಾಗರಾಜು ಸಾವಿಗೆ ಶರಣಾದ ಯೋಧ ಎಂದು ಗುರುತಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯಲ್ಲಿ ಸೇವೆ ಸಲ್ಲಿಸಿದ್ದರು.
ಚಂಡೀಗಢದಲ್ಲಿರುವ ಪಂಜಾಜ್ ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ನಾಗರಾಜು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಚಂಡೀಗಢ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.