ಕರ್ನಾಟಕ

karnataka

ETV Bharat / bharat

ಭಾರತದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು

15ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರಿಗೆ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ ಅವರು ಪ್ರಮಾಣವಚನ ಬೋಧಿಸಿದರು.

droupadi-murmu
ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

By

Published : Jul 25, 2022, 10:37 AM IST

Updated : Jul 25, 2022, 11:22 AM IST

ನವದೆಹಲಿ:ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರಿಗೆ ಸಂಸತ್ತಿನಲ್ಲಿ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅವರು ಇಂದು ಪ್ರಮಾಣವಚನ ಬೋಧಿಸಿದರು. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸಿದ ದೇಶದ ಎರಡನೇ ಮತ್ತು ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಮುರ್ಮು ಪಾತ್ರರಾದರು. ಇದಲ್ಲದೇ, 1947 ರ ಬಳಿಕ ಜನಿಸಿದವರಲ್ಲಿ ರಾಷ್ಟಪತಿಯಾದ ಮೊದಲಿಗರಾಗಿದ್ದಾರೆ.

ಪ್ರಮಾಣ ವಚನ

ಸಂಸತ್ತಿನಲ್ಲಿ ಹಮ್ಮಿಕೊಂಡಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್​, ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು.

'ನಾನು ಬಡವರ ಕನಸಿನ ಪ್ರತೀಕ': ಪ್ರಮಾಣ ಸ್ವೀಕರಿಸಿ ಮಾತನಾಡಿದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು, "ರಾಷ್ಟ್ರಪತಿ ಹುದ್ದೆ ಅಲಂಕರಿಸಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನನ್ನ ಆಯ್ಕೆಯು ಭಾರತದಲ್ಲಿನ ಬಡವರು ಕನಸುಗಳು ನನಸಾಗುತ್ತವೆ ಎಂಬುದಕ್ಕೆ ಸಾಕ್ಷಿಯಾಗಿದೆ" ಎಂದು ಹೇಳಿದರು.

ನೂತನ ರಾಷ್ಟ್ರಪತಿಗಳ ಭಾಷಣ

"ಅಭಿವೃದ್ಧಿಯೇ ಕಾಣದ ಜನರು, ಬಡವರು, ದಲಿತರು, ಹಿಂದುಳಿದವರು, ಗಿರಿಜನರು ನನ್ನನ್ನು ತಮ್ಮ ಪ್ರತಿಬಿಂಬವಾಗಿ ನೋಡುತ್ತಾರೆ ಎಂಬುದೇ ನನಗಿರುವ ಆತ್ಮತೃಪ್ತಿ. ಇಂದು ನಾನು ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಪಡೆದಿರುವುದರ ಹಿಂದೆ ದೇಶದ ಎಲ್ಲ ಬಡವರ ಆಶೀರ್ವಾದವಿದೆ. ಇದು ಕೋಟ್ಯಂತರ ಮಹಿಳೆಯರ ಕನಸುಗಳು ಮತ್ತು ಸಾಮರ್ಥ್ಯಗಳ ಪ್ರತಿಬಿಂಬ" ಎಂದು ಅಭಿಪ್ರಾಯಪಟ್ಟರು.

"ಸ್ವತಂತ್ರ ಭಾರತದಲ್ಲಿ ಜನಿಸಿದ ದೇಶದ ಮೊದಲ ರಾಷ್ಟ್ರಪತಿಯಾಗಿದ್ದೇನೆ. ದೇಶದ ನಾಗರಿಕರೊಂದಿಗೆ ಜೊತೆಗೂಡಿ ಸ್ವಾತಂತ್ರ್ಯ ಹೋರಾಟಗಾರರು ಹೊಂದಿದ್ದ ನಿರೀಕ್ಷೆಗಳನ್ನು ಪೂರೈಸಲು ಎಲ್ಲ ಪ್ರಯತ್ನಿಗಳಿಗೆ ವೇಗ ನೀಡುವೆ" ಎಂದು ಇದೇ ಸಂದರ್ಭದಲ್ಲಿ ಮುರ್ಮು ಅವರು ಭರವಸೆ ನೀಡಿದರು.

ಎನ್​ಡಿಎ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್​ ಸಿನ್ಹಾ ಅವರ ವಿರುದ್ಧ ಶೇ.65 ಕ್ಕೂ ಅಧಿಕ ಮತ ಪಡೆದು ಗೆಲುವು ಸಾಧಿಸಿದ್ದರು.

ಇದನ್ನೂ ಓದಿ:ರಾಜ್‌ಘಾಟ್​​ಗೆ ತೆರಳಿ ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ದ್ರೌಪದಿ ಮುರ್ಮು

Last Updated : Jul 25, 2022, 11:22 AM IST

ABOUT THE AUTHOR

...view details