ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ಮುಂದುವರೆದಿದೆ. ಇದೀಗ ಆಲಮದಾರ್ ಕಾಲೋನಿ ಡೆನ್ಮಾರ್ ಈದ್ಗಾದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಉಗ್ರಗಾಮಿಗಳು ಈ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದ ಬಳಿಕ ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.