ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಕಳೆದ ಕೆಲ ವಾರಗಳಿಂದ ಮಹಾಮಾರಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದೆ. ಇದರ ಬೆನ್ನಲ್ಲೇ 2021ನೇ ಸಾಲಿನ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆ ಮೂಂದೂಡಿಕೆ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಹಾಕಿದೆ.
ಕೇಂದ್ರ ಬೋರ್ಡ್ ಪರೀಕ್ಷೆ ಮುಂದೂಡಿಕೆ ಮಾಡುವಂತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಕೋವಿಡ್ ಹೆಚ್ಚಾಗುತ್ತಿರುವ ಕಾರಣ 12ನೇ ತರಗತಿ ಬೋರ್ಡ್ ಪರೀಕ್ಷೆ ಮೇ ಕೊನೆಯಲ್ಲಿ ಹಾಘೂ 10ನೇ ತರಗತಿ ಪರೀಕ್ಷೆ ಜೂನ್ ತಿಂಗಳಲ್ಲಿ ನಡೆಸಲಾಗುವುದು ಎಂದು ಅಲ್ಲಿನ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ತಿಳಿಸಿದ್ದಾರೆ. ಪರೀಕ್ಷಾ ದಿನಾಂಕವನ್ನ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯದ ಸ್ಥಿತಿಯಲ್ಲಿ ರಾಜ್ಯದಲ್ಲಿ ಪರೀಕ್ಷೆ ನಡೆಸುವುದು ಕಷ್ಟ ಎಂದು ಅವರು ತಿಳಿಸಿದ್ದಾರೆ.