ಬಾರಾಮುಲ್ಲಾ(ಜಮ್ಮು ಕಾಶ್ಮೀರ):ಭಯೋತ್ಪಾದಕರ ದಾಳಿಗಳ ನಡುವೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ರಜೌರಿ ಜಿಲ್ಲೆಯ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಜಮ್ಮು ಕಾಶ್ಮೀರ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.
ಕೆಲವು ಮಾಹಿತಿಗಳ ಪ್ರಕಾರ, ರಫಿಯಾಬಾದ್ ಒಂದೇ ಕುಟುಂಬದವರು ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ. ಓರ್ವನ ಶವ ಪತ್ತೆಯಾಗಿದ್ದು, ಉಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಅಮೆರಿಕದ ಯುದ್ಧ ವಿಮಾನಕ್ಕೆ ಜೋಕಾಲಿ ಕಟ್ಟಿ ಆಟವಾಡಿದ ತಾಲಿಬಾನಿಗಳು- Video Viral