ಉತ್ತರಕಾಶಿ ( ಉತ್ತರಾಖಂಡ ):ಮೇಘಸ್ಫೋಟದಿಂದ ಭಾರಿ, ಮಳೆ ಪ್ರವಾಹ ಉಂಟಾಗಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.
ಇಬ್ಬರು ಮಹಿಳೆಯರು ಮತ್ತು ಆರು ವರ್ಷದ ಮಗು ಮೃತಪಟ್ಟಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ. ಮೇಘಸ್ಫೋಟದಿಂದ ಉತ್ತರಕಾಶಿ ಜಿಲ್ಲೆಯ ಮಾಂಡೋ ಮತ್ತು ನಿರಾಕೋಟ್ ಗ್ರಾಮಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸುಮಾರು 15 ರಿಂದ 20 ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆ ( ಎಸ್ಡಿಆರ್ಎಫ್ ) ಮತ್ತು ಪೊಲೀಸರು ಆಗಮಿಸಿದ್ದಾರೆ.
ಅವೇಶಗಳಡಿ ಸಿಲುಕಿದ್ದ ಓರ್ವ ಹಿರಿಯ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಭಟ್ವಾಡಿ ಬ್ಲಾಕ್‌ನ ಕಂಕರಡಿ ಗ್ರಾಮದಲ್ಲಿ ಒಬ್ಬ ವ್ಯಕ್ತಿ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ವರದಿಯಾಗಿದೆ. ಭಾನುವಾರ ರಾತ್ರಿ 8.30 ರ ಸುಮಾರಿಗೆ ಭಾರಿ ಮಳೆಯಿಂದ ಮಾಂಡೋ ಗ್ರಾಮದ ಪ್ರವಾಹ ಉಂಟಾಗಿತ್ತು.