ಕರ್ನಾಟಕ

karnataka

ETV Bharat / bharat

FM ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ ಬೊಮ್ಮಾಯಿ: GST ಪರಿಹಾರ ಬಿಡುಗಡೆಗೆ ಮನವಿ - ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ

ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವ​ರನ್ನು ಭೇಟಿಯಾಗಿ ಜಿಎಸ್​ಟಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

By

Published : Jul 31, 2021, 12:44 PM IST

Updated : Jul 31, 2021, 12:51 PM IST

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್​ಟಿ ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಸೇರಿ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ರಾಜ್ಯ ಅಭಿವೃದ್ಧಿ ವಿಚಾರಗಳ ಸಂಬಂಧ ವಿವಿಧ ಸಚಿವರ ಜತೆ ಮಾತುಕತೆ ನಡೆಸುತ್ತಿದ್ದಾರೆ.

ಈ ಹಿಂದೆ ಸಿಎಂ ಆಗಿದ್ದ ಬಿ.ಎಸ್. ಯಡಿಯೂರಪ್ಪ ಕೂಡ ಹಲವು ಬಾರಿ ಜಿಎಸ್​ಟಿ ಹಣ ಬಿಡುಗಡೆಗಾಗಿ ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಇದೀಗ ನೂತನ ಸಿಎಂ ಬೊಮ್ಮಾಯಿ ಕೂಡ ಅದೇ ಹಾದಿ ಹಿಡಿದಿದ್ದಾರೆ. ಮೋದಿ ಸರ್ಕಾರ ಈಗಲಾದರೂ, ಸರ್ಕಾರಕ್ಕೆ ಬರಬೇಕಿದ್ದ ಜಿಎಸ್​ಟಿ ಪಾಲು ನೀಡುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮಹಾತ್ಮ ಗಾಂಧೀಜಿ - ವಾಜಪೇಯಿ ಸಮಾಧಿಗೆ ಸಿಎಂ ಬೊಮ್ಮಾಯಿ ಪುಷ್ಪನಮನ.. ಸೀತಾರಾಮನ್​ ಭೇಟಿ

Last Updated : Jul 31, 2021, 12:51 PM IST

ABOUT THE AUTHOR

...view details