ಕರ್ನಾಟಕ

karnataka

ETV Bharat / bharat

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ; ಬಿಟ್ ಕಾಯಿನ್ ಹಗರಣದ ಕುರಿತು ನಮೋಗೆ ಮಾಹಿತಿ? - ದೆಹಲಿ

ದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದು, ರಾಜ್ಯದಲ್ಲಿ ಕೇಳಿ ಬರುತ್ತಿರುವ ಬಿಟ್‌ಕಾಯಿನ್‌ ಹಗರಣದ ಬಗ್ಗೆ ಕುರಿತು ಪ್ರಧಾನಿಗಳಿಗೆ ಸಿಎಂ ಸಮಗ್ರ ವಿವರಣೆ ನೀಡಿದ್ದಾರೆ ಎನ್ನಲಾಗುತ್ತಿದೆ.

CM Bommai meets pm narendra modi in delhi today
ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ; ಬಿಟ್ ಕಾಯಿನ್ ಹಗರಣದ ಕುರಿತು ನಮೋಗೆ ಮಾಹಿತಿ?

By

Published : Nov 11, 2021, 12:36 PM IST

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಸುದ್ದು ಮಾಡುತ್ತಿದ್ದು, ಮುಖ್ಯಮಂತ್ರಿ ಹೆಸರೂ ಸುತ್ತಿಕೊಳ್ಳುತ್ತಿರುವ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಿ ಕಚೇರಿಯಲ್ಲಿ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ರಾಮಾಯಣ ಕೃತಿಯನ್ನು ನೀಡಿ ರಾಜ್ಯ ಸರ್ಕಾರದ ಪರವಾಗಿ ಗೌರವ ಸಲ್ಲಿಕೆ ಮಾಡಿದರು. ನಂತರ ಕೆಲ ಕಾಲ ರಾಜ್ಯ ರಾಜಕೀಯ ಕುರಿತು ಮಹತ್ವದ ಮಾತುಕತೆ ನಡೆಸಿದರು.

ಪ್ರಧಾನಿ ಮೋದಿಗೆ ರಾಮಾಯಣ ಕೃತಿ ನೀಡಿದ ಸಿಎಂ ಬೊಮ್ಮಾಯಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ದೇಶಾದ್ಯಂತ ಸುದ್ದಿಯಾಗುತ್ತಿದ್ದು, ಪ್ರತಿಪಕ್ಷ ಕಾಂಗ್ರೆಸ್ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಇದರಿಂದ ಕಸಿವಿಸಿಗೊಂಡಿರುವ ಸಿಎಂ ಪ್ರತಿಪಕ್ಷಗಳಿಗೆ ತಿರುಗೇಟು ನೀಡುತ್ತಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.

ಹಗರಣಗಳು, ಆರೋಪ ಮುಕ್ತ ಆಡಳಿತಕ್ಕೆ ಮನ್ನಣೆ ನೀಡಿರುವ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರದ ಆರೋಪಗಳನ್ನು ಸಹಿಸುವುದಿಲ್ಲ. ಹಾಗಾಗಿ ಬಿಟ್ ಕಾಯಿನ್ ಪ್ರಕರಣ ಕುರಿತು ಪ್ರಧಾನಿಗಳಿಗೆ ಸಿಎಂ ಸಮಗ್ರ ವಿವರಣೆ ನೀಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ABOUT THE AUTHOR

...view details