ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಸೋಮವಾರ ಮೊದಲ ಬಾರಿಗೆ ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಭೇಟಿ ಮಾಡಿದರು. ರಾಜ್ಯ ಅತಿಥಿ ಗೃಹದಲ್ಲಿ ಇಬ್ಬರ ನಡುವಿನ ಮೊದಲ ಔಪಚಾರಿಕ ಸಭೆ ನಡೆಯಿತು. ಮೇ 30 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶದ ಕಾರ್ಯಸೂಚಿಯ ಕುರಿತು ಇಬ್ಬರೂ ಚರ್ಚಿಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜಗನ್ ಮೋಹನ್ ರೆಡ್ಡಿ ಮತ್ತು ಮುಖ್ಯ ನ್ಯಾಯಮೂರ್ತಿ ಮಿಶ್ರಾ ಅವರು ಸಮಾವೇಶದಲ್ಲಿ ರಾಜ್ಯದಿಂದ ವರದಿ ಮಾಡಬೇಕಾದ ವಿಷಯಗಳ ಕುರಿತು ಚರ್ಚಿಸಿದರು. ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ನ್ಯಾಯಾಂಗ, ಇ-ಕೋರ್ಟ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳ ವಿಲೇವಾರಿ ಹಾಗೂ ಕಾನೂನು ನೆರವಿಗೆ ಮಾರ್ಗಸೂಚಿಗಳ ಕುರಿತು ಚರ್ಚಿಸಲಾಯಿತು. ಜಂಟಿ ಸಮಾವೇಶದಲ್ಲಿ ರಾಜ್ಯದ ಪರವಾಗಿ ಮಂಡಿಸಬೇಕಾದ ವಿಷಯಗಳು, ಎಂಬುದನ್ನೂ ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.