ಶಿಮ್ಲಾ(ಹಿಮಾಚಲ ಪ್ರದೇಶ): ಆಡಳಿತಾರೂಢ ಬಿಜೆಪಿ ಪಕ್ಷ ಹಿಮಾಚಲ ಪ್ರದೇಶದಲ್ಲಿ ಹೀನಾಯವಾಗಿ ಸೋಲನ್ನಪ್ಪಿದೆ. ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಬಿಜೆಪಿ ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಆದರೆ ಹಣದುಬ್ಬರದ ಕಾರಣದಿಂದಾಗಿ ಬಿಜೆಪಿ ಸೋಲು ಅನುಭವಿಸಿದೆ ಎಂದು ಹೇಳಿಕೆ ನೀಡಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನದು ಅತ್ಯಂತ ಕಡಿಮೆ ಅಂತರದ ಗೆಲುವು ಎಂದು ಜೈರಾಮ್ ಠಾಕೂರ್ ಹೇಳಿದ್ದು, ಕಾಂಗ್ರೆಸ್ ಈ ಗೆಲುವನ್ನು ಸಂಭ್ರಮಿಸಲು ಯೋಗ್ಯವಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.