ಕರ್ನಾಟಕ

karnataka

ETV Bharat / bharat

ಭಾರೀ ಮಳೆ: ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮೂರು ದಿನ ರಜೆ ಘೋಷಿಸಿದ ಸಿಎಂ ಕೆಸಿಆರ್ - elangana CM KCR took a key decision in the wake of heavy rains in Telangana

ರಾಜ್ಯಾದ್ಯಂತ ಸತತ ಮೂರನೇ ದಿನವೂ ಮಳೆ ಮುಂದುವರಿಕೆ- ಹೈದರಾಬಾದ್ ನಲ್ಲಿ ಸರಾಸರಿ 8 ಸೆಂ.ಮೀ. ಮಳೆ ದಾಖಲು- ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆ:  ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮೂರು ದಿನ ರಜೆ ಘೋಷಿಸಿದ ಸಿಎಂ ಕೆಸಿಆರ್
ಭಾರೀ ಮಳೆ: ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮೂರು ದಿನ ರಜೆ ಘೋಷಿಸಿದ ಸಿಎಂ ಕೆಸಿಆರ್

By

Published : Jul 10, 2022, 8:16 PM IST

ಹೈದರಾಬಾದ್​: ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಸಿಎಂ ಕೆಸಿಆರ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ಮತ್ತು ಬುಧವಾರ ಮೂರು ದಿನಗಳ ಕಾಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಪ್ರಗತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನೆಯಲ್ಲಿ ಸಿಎಂ ಕೆಸಿಆರ್ ಈ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯಾದ್ಯಂತ ಸತತ ಮೂರನೇ ದಿನವೂ ಮಳೆ ಮುಂದುವರಿದಿದೆ. ಕಳೆದ ಎರಡು ದಿನಗಳಲ್ಲಿ ಹೈದರಾಬಾದ್ ನಲ್ಲಿ ಸರಾಸರಿ 8 ಸೆಂ.ಮೀ. ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇವತ್ತಿಗೂ ಮಳೆ ಸುರಿಯುತ್ತಿದೆ. ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಜಿಎಚ್‌ಎಂಸಿ ವ್ಯಾಪ್ತಿಯ ಮಾನ್ಸೂನ್ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ.

ತುರ್ತು ಹೊರತು ಹೊರಗೆ ಬರಬೇಡಿ : ರಾಜ್ಯದಲ್ಲಿ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಜನರು ಎಚ್ಚೆತ್ತುಕೊಳ್ಳುವಂತೆ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಸೂಚಿಸಿದ್ದಾರೆ. ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಚಿವರು ಹೈದರಾಬಾದ್ ನಗರದ ಜನತೆಗೆ ಮನವಿ ಮಾಡಿದ್ದಾರೆ. ತುರ್ತು ಹೊರತು ಹೊರಗೆ ಬರಬೇಡಿ, ಅಧಿಕಾರಿಗಳು ಜಾಗೃತರಾಗಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆ 040-21111111 ಅನ್ನು ಸಂಪರ್ಕಿಸಬೇಕು. ಕಾರ್ಪೊರೇಟರ್‌ಗಳು ತಮ್ಮ ವಿಭಾಗಗಳಿಗೆ ಭೇಟಿ ನೀಡಿ ಪರಿಸ್ಥಿತಿಗಳನ್ನು ಪರಿಶೀಲಿಸುವಂತೆ ಸಚಿವರು ಆದೇಶಿಸಿದ್ದಾರೆ.

ಕಳೆದ ಮೂರು ದಿನಗಳಿಂದ ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಮತ್ತು ಎಲ್ಲಾ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ನಿರ್ದೇಶನದಂತೆ ಮುಖ್ಯ ಕಾರ್ಯದರ್ಶಿಗಳು ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು.

ಆಸಿಫಾಬಾದ್, ನಿರ್ಮಲ್, ನಿಜಾಮಾಬಾದ್, ಪೆದ್ದಪಲ್ಲಿ, ಸಿರಿಸಿಲ್ಲಾ, ಭೂಪಾಲಪಲ್ಲಿ ಮತ್ತು ಮುಲುಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ಕೆರೆ, ಕೊಳ, ಜಲಾಶಯಗಳು ತುಂಬಿ ತುಳುಕುತ್ತಿರುವ ಕಾರಣ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಅಗತ್ಯವಿದ್ದರೆ ವಿಶೇಷ ಶಿಬಿರಗಳಿಗೆ ಸ್ಥಳಾಂತರಿಸಬಹುದು. ರಸ್ತೆಗಳಿಗೆ ಯಾವುದೇ ರೀತಿಯ ಹಾನಿಯಾಗಿದ್ದರೂ ತಕ್ಷಣ ದುರಸ್ತಿ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಈದ್ ಅಲ್-ಅಧಾ ಮುನ್ನಾದಿನ ಭಾರತ-ಪಾಕ್ ಗಡಿಯಲ್ಲಿ ಸಂಭ್ರಮ: ಸಿಹಿ ಹಂಚಿಕೊಂಡ ಬಿಎಸ್‌ಎಫ್, ಪಾಕಿಸ್ತಾನ್​ ರೇಂಜರ್ಸ್​

For All Latest Updates

TAGGED:

ABOUT THE AUTHOR

...view details