ನವದೆಹಲಿ:ದೆಹಲಿಮುಖ್ಯಮಂತ್ರಿ ಮತ್ತು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿ ವಿಧಾನಸಭೆಯಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಅದಾನಿ ವಿವಾದವನ್ನು ಪ್ರಸ್ತಾಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಹೌದು, ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಅವರು ಮೋದಿಯನ್ನು ಸ್ವಾತಂತ್ರ್ಯದ ನಂತರ ಅತ್ಯಂತ ಭ್ರಷ್ಟ ಪ್ರಧಾನಿ ಎಂದು ಕರೆದರು. ಈ ಮೂಲಕ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಕ್ ಸಮರ ನಡೆಸಿದರು.
ಕೇಂದ್ರ ಸರ್ಕಾರದಿಂದ ವ್ಯಾಪಕವಾಗಿ ಲೂಟಿ- ಸಿಎಂ ಕೇಜ್ರಿವಾಲ್:ಕೇಂದ್ರ ಸರ್ಕಾರದಿಂದ ವ್ಯಾಪಕವಾಗಿ ಲೂಟಿ ನಡೆಯುತ್ತಿದೆ. ಕಾಂಗ್ರೆಸ್ 75 ವರ್ಷಗಳಲ್ಲಿ ಲೂಟಿ ಮಾಡಿದ್ದಕ್ಕಿಂತ ಹೆಚ್ಚಿನ ಲೂಟಿಯನ್ನು ಅವರು ಏಳು ವರ್ಷಗಳಲ್ಲೇ ಮಾಡಿದ್ದಾರೆ. ದೇಶವು ಕಷ್ಟದ ಸಮಯದಲ್ಲಿ ಮುನ್ನಡೆಯುತ್ತಿದೆ. ಈ ಪರಿಸ್ಥಿತಿಯ ಬಗ್ಗೆ ನಾವು ತೀವ್ರ ಚಿಂತಿತರಾಗಿದ್ದೇವೆ ಎಂದು ಕೇಜ್ರಿವಾಲ್ ಅವರು ಗಂಭೀರವಾಗಿ ಆರೋಪಿಸಿದರು.
ಇದನ್ನೂ ಓದಿ:ಛತ್ತೀಸ್‌ಗಢದ ಕಂಕೇರ್‌ನಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಬಿಎಸ್‌ಎಫ್ ಯೋಧರಿಗೆ ಗಾಯ
ಕಡಿಮೆ ಶಿಕ್ಷಣ ಪಡೆದಿರುವ ಪ್ರಧಾನಿ ಮೋದಿ- ಸಿಎಂ ಕೇಜ್ರಿವಾಲ್: ಪ್ರಧಾನಿ ನರೇಂದ್ರ ಮೋದಿ ಕಡಿಮೆ ಶಿಕ್ಷಣ ಪಡೆದಿದ್ದಾರೆ ಮತ್ತು ಅವರು ವಿಷಯಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದಿರುವುದು ಕಳವಳಕಾರಿಯಾದ ಸಂಗತಿಯಾಗಿದೆ. ಅದಾನಿ ಜೊತೆಗೆ ಪ್ರಧಾನಿ ಮೋದಿ ಯಾವ ರೀತಿಯ ಸಂಬಂಧ ಹೊಂದಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಪ್ರಶ್ನಿಸಿದರು.