ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಧ್ಯಾಹ್ನ 1 ಗಂಟೆಗೆ ಕೋವಿಡ್-19 ಪರಿಸ್ಥಿತಿ ಪರಿಶೀಲಿಸಲು ಸಭೆ ನಡೆಸಲಿದ್ದಾರೆ. ಕೋವಿಡ್-19 ನಿರ್ವಹಣೆಯ ನೋಡಲ್ ಸಚಿವರಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.
"ದೆಹಲಿಯ ಕೊರೊನಾ ಪರಿಸ್ಥಿತಿಯನ್ನು ದಿನನಿತ್ಯದ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ಮಧ್ಯಾಹ್ನ 1 ಗಂಟೆಗೆ ನೋಡಲ್ ಸಚಿವರು, ಆರೋಗ್ಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಪರಿಶೀಲನಾ ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.