ಕೋಲ್ಕತ್ತಾ(ಪಶ್ಚಿಮ ಬಂಗಾಳ):ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ, ಶಿಷ್ಯ ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದರು. ಈ ಹಿನ್ನೆಲೆ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.
2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆಪ್ಟೆಂಬರ್ 30 ರಂದು ನಡೆಯುತ್ತಿರುವ ಬೈ ಎಲೆಕ್ಷನ್ನಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ. ಅಕ್ಟೋಬರ್ 3ರಂದು ಫಲಿತಾಂಶ ಹೊರ ಬೀಳಲಿದೆ.
ಕಳೆದ ಕೆಲ ತಿಂಗಳ ಹಿಂದೆ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡಿದ್ದ ಸಿಎಂ ಮಮತಾ ಬ್ಯಾನರ್ಜಿ ಇದೀಗ ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಇಂದು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.
ಈ ನಡುವೆ ಬಿಜೆಪಿ ಪ್ರಿಯಾಂಕಾಟಿಬ್ರೆವಾಲ್ ಅವರನ್ನು ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಸಿದೆ.