ಜಮುಯಿ (ಬಿಹಾರ):ವಿರೋಧ ಪಕ್ಷದ ಅಭ್ಯರ್ಥಿ ಸಿಎಂ ನಿತೀಶ್ ಕುಮಾರ್ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಎಂಬುದರ ಕುರಿತಂತೆ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು, ಇದರ ನಡುವೆ ನಿತೀಶ್ ಎದ್ದಿರುವ ವದಂತಿಗಳನ್ನು ತಳ್ಳಿ ಹಾಕಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದ ನಂತರ ಚರ್ಚೆ ತೀವ್ರಗೊಂಡಿದೆ. ಆದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತ್ರ ಇದನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.
ಪ್ರಸ್ತುತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಈ ವರ್ಷದ ಜುಲೈನಲ್ಲಿ ಕೊನೆಗೊಳ್ಳಲಿದೆ. ಇದರಿಂದಾಗಿ ಮುಂದಿನ ಅಧ್ಯಕ್ಷರ ಆಯ್ಕೆಯ ಊಹಾಪೋಹಗಳು ಜೋರಾಗಿವೆ. ಈ ನಡುವೆ ಬಿಹಾರ ಸಿಎಂ ನಿತೀಶ್ ಕುಮಾರ್ ವಿಪಕ್ಷಗಳಿಂದ ರಾಷ್ಟ್ರಪತಿ ಅಭ್ಯರ್ಥಿಯಾಗುವ ಚರ್ಚೆ ತೀವ್ರಗೊಂಡಿದೆ.