ಕರ್ನಾಟಕ

karnataka

ETV Bharat / bharat

ಸಿ ಆರ್ ಝೆಡ್ ವಿಸ್ತರಣೆಗೆ ಅನುಮತಿ - ಕರಾವಳಿ ಪ್ರದೇಶ ಅಭಿವೃದ್ಧಿಯಾಗಲಿದೆ: ಸಿಎಂ ವಿಶ್ವಾಸ - ರಾಜ್ಯದ ಕರಾವಳಿ ಪ್ರದೇಶ ಕರಾವಳಿ ನಿಯಂತ್ರಣಾ ವಲಯ

ಗೋವಾ ಹಾಗೂ ಕೇರಳ ರಾಜ್ಯಗಳಲ್ಲಿ ಕರಾವಳಿ ನಿಯಂತ್ರಣಾ ವಲಯ ವಿಸ್ತರಣೆಗೆ ಅನುಮತಿ ನೀಡಿರುವುದರಿಂದ ಹೋಟೆಲ್ ಉದ್ಯಮ, ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

coastal area of the state will be developed
coastal area of the state will be developed

By

Published : Jul 25, 2022, 9:48 PM IST

ನವದೆಹಲಿ/ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶಗಳಿಗೂ ಕರಾವಳಿ ನಿಯಂತ್ರಣ ವಲಯ(ಸಿ ಆರ್ ಝೆಡ್) ವಿಸ್ತರಣೆ ಪಡೆಯಲು ಚೆನ್ನೈನ ಪ್ರಾದೇಶಿಕ ಕಚೇರಿಯಿಂದ ಅನುಮತಿ ದೊರೆತಿದ್ದು, ಕರಾವಳಿ ಪ್ರದೇಶ ಅಭಿವೃದ್ಧಿಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ಮಾತನಾಡಿದ ಅವರು, ಗೋವಾ ಹಾಗೂ ಕೇರಳ ರಾಜ್ಯಗಳಲ್ಲಿ ಕರಾವಳಿ ನಿಯಂತ್ರಣ ವಲಯ (ಸಿ ಆರ್ ಝೆಡ್ ) ವಿಸ್ತರಣೆಗೆ ಅನುಮತಿ ನೀಡಿರುವುದರಿಂದ ಹೋಟೆಲ್ ಉದ್ಯಮ, ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗಿದೆ. ಇದೇ ರೀತಿ ರಾಜ್ಯದ ಕರಾವಳಿ ಪ್ರದೇಶಗಳಿಗೂ ಸಿ ಆರ್ ಝೆಡ್ ವಿಸ್ತರಣೆ ಪಡೆಯಲು ಗಂಭೀರ ಪ್ರಯತ್ನಗಳನ್ನು ಮಾಡಲಾಗಿದ್ದು, ಚೆನ್ನೈನ ಪ್ರಾದೇಶಿಕ ಕಚೇರಿಯಿಂದ ಅನುಮತಿ ದೊರೆತಿದೆ.

ಇದರಿಂದ ಕರ್ನಾಟಕದ 330 ಕಿ.ಮೀ. ಉದ್ದದ ಕರಾವಳಿ ಪ್ರದೇಶದ ಅಭಿವೃದ್ಧಿಯ ಜೊತೆ, ಆರ್ಥಿಕತೆ, ಪ್ರವಾಸೋದ್ಯಮ, ಮೀನುಗಾರಿಕೆ ಸೇರಿದಂತೆ ಕರಾವಳಿ ಭಾಗದ ಚಟುವಟಿಕೆಗಳು ಅಭಿವೃದ್ಧಿಗೊಳ್ಳಲಿದೆ. ರಾಜ್ಯದ ಯೋಜನೆಗಳಿಗೆ ಶೀಘ್ರಗತಿಯಲ್ಲಿ ಮಂಜೂರಾತಿ ಪಡೆಯಲು ಕೇಂದ್ರ ಸಚಿವರೊಂದಿಗೆ ಖುದ್ದು ನಾನು ಭೇಟಿಯಾಗುತ್ತಿದ್ದೇನೆ ಎಂದರು.

ರಿಂಗ್ ರಸ್ತೆ ನಿರ್ಮಾಣಕ್ಕೆ ಒತ್ತು: ಕೇಂದ್ರ ಸಾರಿಗೆ ಸಚಿವರ ಜೊತೆ ಚರ್ಚಿಸಲಾಗಿದ್ದು, 5 ರಿಂಗ್ ರಸ್ತೆಗಳ ಬಗ್ಗೆ ಚರ್ಚಿಸಲಾಗಿದೆ. ಜಿಎಸ್ ಟಿ ಮನ್ನಾ ಸೇರಿದಂತೆ ಕೆಲವು ರಿಯಾಯಿತಿಗಳನ್ನು ಕೇಂದ್ರ ಸರ್ಕಾರ ನೀಡಿದ್ದು, ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ರಾಯಚೂರು, ಕೊಪ್ಪಳ, ಗುಲ್ಬರ್ಗಾ, ಬೆಳಗಾವಿ, ಗದಗ , ಈ ಐದು ಪ್ರದೇಶಗಳಲ್ಲಿ ರಿಂಗ್ ರಸ್ತೆಗಳನ್ನು ನಿರ್ಮಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರೈಲ್ವೆ ಮೇಲ್ಸೆತುವೆಗಳನ್ನು 24 ಪ್ರಸ್ತಾವನೆಗಳಿಗೆ ಮಂಜೂರಾತಿ ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರದ ತಾತ್ವಿಕ ಒಪ್ಪಿಗೆ: ಕೇಂದ್ರ ಜವಳಿ ಹಾಗೂ ವಾಣಿಜ್ಯ ಕೈಗಾರಿಕಾ ಸಚಿವರನ್ನು ಭೇಟಿಯಾಗಿ, ರಾಜ್ಯದಲ್ಲಿ ಎರಡು ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆ ಬಗ್ಗೆ ಚರ್ಚಿಸಲಾಗಿದೆ. ವಿಜಯಪುರ ಹಾಗೂ ಕಲಬುರಗಿ ಯಲ್ಲಿ ಟೆಕ್ಸ್ ಟೈಲ್ ಪಾರ್ಕ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಇದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಅನುಕೂಲವಾಗುತ್ತದೆ ಎಂದರು.

3 ಮರೀನಾಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಾಗಿ ಕಾರ್ಯಸಾಧ್ಯತಾ ನಿಧಿ: ಕೇಂದ್ರ ಬಂದರು ಮತ್ತು ಜಲಸಾರಿಗೆ ಸಚಿವರನ್ನು ಭೇಟಿಯಾಗಿ ರಾಜ್ಯದ ಹಲವಾರು ಬಾಕಿ ಇದ್ದ ಪ್ರಸ್ತಾವನೆಗಳ ಮಂಜೂರಾತಿ ಬಗ್ಗೆ ಚರ್ಚಿಸಲಾಗಿದೆ. ಸುಮಾರು 1,800 ಕೋಟಿ ರೂ.ಗಳ ಒಟ್ಟು 27 ಯೋಜನೆಗಳನ್ನು ಸಾಗರಮಾಲಾ ಯೋಜನೆಯಡಿ ಪ್ರಸ್ತಾವನೆಗಳ ಪೈಕಿ 10 ಯೋಜನೆಗಳಿಗೆ ಈಗಾಗಲೇ ಮಂಜೂರಾತಿ ನೀಡಲಾಗಿದೆ. ಇನ್ನು 10 ಯೋಜನೆಗಳಿಗೆ ಸ್ಪಷ್ಟೀಕರಣ ಕೇಳಲಾಗಿದ್ದು, ಅದನ್ನು ನೀಡಲಾಗಿದೆ. ಕೆಲವು ಪ್ರಸ್ತಾವನೆಗಳನ್ನು ಬದಲಾವಣೆ ಮಾಡಿ ಕಳುಹಿಸಲು ಸೂಚಿಸಿದ್ದಾರೆ. ಇದರಲ್ಲಿ ಪ್ರಮುಖವಾಗಿ 250 ಕೋಟಿ ರೂ.ಗಳ ಮಜಾಲಿ ಮೀನುಗಾರಿಕೆ ಬಂದರು, ಮ್ಯಾರಿಟೈಮ್ ಮೀನುಗಾರಿಕಾ ತರಬೇತಿ ಸಂಸ್ಥೆಯ ಉದ್ದೇಶ ಮತ್ತು ಹೆಸರು ಬದಲಾಯಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಕಾಳಿ ವಾಟರ್ ವೇ ಡಿಪಿಆರ್ ಕಳುಹಿಸಿದ ಕೂಡಲೇ ಮಂಜೂರಾತಿ ಆಗಲಿದೆ. ಅಂಗರಘಟ್ಟದಿಂದ ಮಣಿಪಾಲ ವಾಟರ್ ವೇ ಯೋಜನೆಯ ಸಮೀಕ್ಷೆ ಹಾಗೂ ಡಿಪಿಆರ್ ಸಿದ್ಧವಾಗುತ್ತಿದ್ದು, ಇನ್ನೆರಡು ತಿಂಗಳಲ್ಲಿ ಪ್ರಸ್ತಾವನೆ ಮಂಜೂರಾತಿ ಮಾಡುವುದಾಗಿ ತಿಳಿಸಿದ್ದಾರೆ. ಬೈಂದೂರು, ಮಲ್ಪೆ ಹಾಗೂ ಮಂಗಳೂರು ಮರೀನಾಗಳಲ್ಲಿ ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಕಾರ್ಯಸಾಧ್ಯತಾ ನಿಧಿ ನೀಡಲಾಗುವುದು, ಪಿಪಿಪಿ ಮಾದರಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದ್ದು, ಅದರಂತೆ 8-10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಗ್ಗೆ ತಜ್ಞರಿದ್ದರೆ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಸಿದ್ದರಾಮಯ್ಯ ಕುಷ್ಟಗಿಯಲ್ಲಿ ಸ್ಪರ್ಧಿಸಿದರೂ ಸೋಲು : ಬಿ.ವೈ.ವಿಜಯೇಂದ್ರ

For All Latest Updates

TAGGED:

ABOUT THE AUTHOR

...view details