ಕರ್ನಾಟಕ

karnataka

ETV Bharat / bharat

ರಾಷ್ಟ್ರಪತಿ ಭೇಟಿಯಾದ ಯುಪಿ ಸಿಎಂ.. ಸೌಜನ್ಯಯುತ ಭೇಟಿ ಎಂದ ಯೋಗಿ ಆದಿತ್ಯನಾಥ್ - ರಾಷ್ಟ್ರಪತಿ ಭೇಟಿಯಾದ ಉತ್ತರಪ್ರದೇಶ ಸಿಎಂ

ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಸಿಎಂ ಯೋಗಿ ಆದಿತ್ಯನಾಥ್​​ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

By

Published : Jul 30, 2021, 6:52 AM IST

ಲಖನೌ:ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯಾಗಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಕೋವಿಂದ್ ಭೇಟಿ ಕುರಿತು ಟ್ವಿಟ್ಟರ್​ನಲ್ಲಿ ಸಿಎಂ ಯೋಗಿ, ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಗೌರವಾನ್ವಿತ ಅಧ್ಯಕ್ಷ ಶ್ರೀ ರಾಮನಾಥ್ ಕೋವಿಂದ್​​ ಅವರನ್ನು ಸೌಜನ್ಯದ ಭೇಟಿಯಾಗಿದ್ದೇನೆ. ನನಗೆ ಅವರ ಅಮೂಲ್ಯ ಸಮಯ ಮತ್ತು ಮಾರ್ಗದರ್ಶನ ನೀಡಿದ್ದಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

2022 ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಇಂಥ ಪರಿಸ್ಥಿತಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸುವುದು ಅನಿವಾರ್ಯ. ಪ್ರಸ್ತುತ ಸಂಸತ್​ ಮಾನ್ಸೂನ್ ಅಧಿವೇಶನ ನಡೆಯುತ್ತಿದ್ದು, ಮತ್ತೊಂದೆಡೆ ಬಿಜೆಪಿ ಸಂಸದರ ಸಭೆಯೂ ನಡೆಯುತ್ತಿದೆ.


ಜುಲೈ 28 ರ ಬುಧವಾರ ಬ್ರಿಜ್, ಕಾನ್ಪುರ ಪ್ರದೇಶಗಳ ಸಂಸದರೊಂದಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸಭೆ ನಡೆಸಿದರು. ಈ ಸಮಯದಲ್ಲಿ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಖಾತೆ ಸಚಿವ ಸುನಿಲ್ ಬನ್ಸಾಲ್​, ಯುಪಿ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ಸಿಂಗ್ ಸಭೆಯಲ್ಲಿ ಇದ್ದರು.

ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಂಸದರಿಗೆ ಅನೇಕ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಆಗಸ್ಟ್ 15 ರಿಂದ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಂಡು, ಸಾರ್ವಜನಿಕರೊಂದಿಗೆ ಮಾತನಾಡಿ. ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರ ಗಮನಕ್ಕೆ ತನ್ನಿ ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಪತ್ರಕರ್ತರ ವಿರುದ್ಧ ದಾಖಲಾಗಿದ್ದ 90 ಪ್ರಕರಣ ಹಿಂತೆಗೆದುಕೊಂಡ ಸ್ಟಾಲಿನ್ ಸರ್ಕಾರ

2017ರಲ್ಲಿ ಬಿಜೆಪಿ 312 ಸ್ಥಾನಗಳಲ್ಲಿ ಜಯಭೇರಿ ಬಾರಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಿದ್ದರು. ಈ ಬಾರಿಯೂ 300 ಕ್ಕೂ ಅಧಿಕ ಕ್ಷೇತ್ರಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ.

ABOUT THE AUTHOR

...view details