ಕೋಲ್ಕತಾ:ಕಲ್ಲಿದ್ದಲು ಅವ್ಯವಹಾರ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದ ಹಾಗೂ ಅಳಿಯ ಅಭಿಷೇಕ್ ಬ್ಯಾನರ್ಜಿ ಹಾಗೂ ಪತ್ನಿ ರುಜೀರಾ ಅವರನ್ನು ಇಂದು ಸಿಬಿಐ ವಿಚಾರಣೆಗೆ ಒಳಪಡಿಸಿದೆ.
ಅಳಿಯನ ಮನೆಗೆ ಭೇಟಿ ನೀಡಿದ ಸಿಎಂ ಮಮತಾ ಬ್ಯಾನರ್ಜಿ.. ಮೊದಲು ಸಮನ್ಸ್ ಒಪ್ಪಿಕೊಳ್ಳಲು ನಿರಾಕರಿಸಿದ್ದ ಅಭಿಷೇಕ್ ನಂತರ ಸಮನ್ಸ್ ತೆಗೆದುಕೊಂಡು ವಿಚಾರಣೆಗೆ ಸಹಕರಿಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿಬಿಐ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಿದೆ.
ಹೀಗಾಗಿ ಸಿಎಂ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ಮನೆಗೆ ಭೇಟಿ ನೀಡಿ ಅಳಿಯನೊಂದಿಗೆ ಚರ್ಚಿಸಿದರು. ಸಿಎಂ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ವಾಪಸ್ ಹೋದ ಬಳಿಕ ಸಿಬಿಐ ಅಧಿಕಾರಿಗಳು ಅಭಿಷೇಕ್ ಬ್ಯಾನರ್ಜಿ ನಿವಾಸಕ್ಕೆ ಭೇಟಿ ನೀಡಿ, ಪ್ರಕರಣ ಸಂಬಂಧ ಇಬ್ಬರನ್ನು ಪ್ರಶ್ನಿಸುತ್ತಿದ್ದಾರೆ.
ಓದಿ: ನಮ್ಮ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಬಹುದು: ಸಿಬಿಐ ಸಮನ್ಸ್ಗೆ ಉತ್ತರಿಸಿದ ಮಮತಾ ಅಳಿಯ