ಕರ್ನಾಟಕ

karnataka

ETV Bharat / bharat

ವಿದ್ಯಾರ್ಥಿನಿ ಮೇಲೆ ಯುವಕನಿಂದ ಅತ್ಯಾಚಾರ, ವಿಡಿಯೋ ವೈರಲ್​ ಮಾಡಿರುವ ಆರೋಪ - ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​

ಕಳೆದ ಆರು ತಿಂಗಳ ಹಿಂದೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಯುವಕನೋರ್ವ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಅಪಹರಣ ಮಾಡಿ, ಅತ್ಯಾಚಾರ ಮಾಡಿದ್ದಾಗಿ ವಿದ್ಯಾರ್ಥಿನಿ ಆರೋಪ ಮಾಡಿದ್ದಾಳೆ.

College Girl student rape
College Girl student rape

By

Published : Sep 14, 2021, 9:57 PM IST

ಬರೇಲಿ(ಉತ್ತರ ಪ್ರದೇಶ): ತನ್ನ ಮೇಲೆ ಅತ್ಯಾಚಾರವೆಸಗಿ, ಅದರ ವಿಡಿಯೋ ವೈರಲ್​ ಮಾಡಲಾಗಿದೆ ಎಂದು ಕಾಲೇಜು ವಿದ್ಯಾರ್ಥಿನಿವೋರ್ವಳು ಗಂಭೀರ ಆರೋಪ ಮಾಡಿದ್ದು, ಇದೀಗ ಸುಭಾಷನಗರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದೆ.

ಕಳೆದ ಆರು ತಿಂಗಳ ಹಿಂದೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಯುವಕನೋರ್ವ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಅಪಹರಣ ಮಾಡಿ, ಅತ್ಯಾಚಾರ ಮಾಡಿದ್ದಾಗಿ ವಿದ್ಯಾರ್ಥಿನಿ ಆರೋಪ ಮಾಡಿದ್ದಾಳೆ. ಘಟನೆಯ ವಿಡಿಯೋ ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದು, ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಮಾಡುವುದಾಗಿ ಬೆದರಿಕೆ ಹಾಕಿ ಮೇಲಿಂದ ಮೇಲೆ ದುಷ್ಕೃತ್ಯವೆಸಗಿದ್ದಾಗಿ ಹೇಳಿದ್ದಾಳೆ. ಇದೀಗ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡಿದ್ದಾರೆಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾಳೆ.

ಕಳೆದ ಎರಡು ದಿನಗಳ ಹಿಂದೆ ಸಂತ್ರಸ್ತ ವಿದ್ಯಾರ್ಥಿನಿ ತನ್ನ ಸಹೋದರಿ ಜೊತೆ ಹೊರಗಡೆ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿ ತಮ್ಮ ಮೇಲೆ ಹಲ್ಲೆ ನಡೆಸಿ, ಮೊಬೈಲ್​ ಕೂಡ ಕಸಿದುಕೊಂಡಿದ್ದಾನೆಂದು ಹೇಳಿದ್ದಾಳೆ. ಕಳೆದ ಒಂದು ವರ್ಷದಿಂದ ಯುವಕರು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪ ಮಾಡಿದ್ದು, ಕಾಲೇಜ್​ಗೆ ಹೋದಾಗಲೆಲ್ಲಾ ಹಿಂಬಾಲಿಸಿ, ಚಿತ್ರಹಿಂಸೆ ನೀಡಿದ್ದಾರೆಂದು ತಿಳಿಸಿದ್ದಾಳೆ. ಇದಕ್ಕೆ ನಾನು ವಿರೋಧ ವ್ಯಕ್ತಪಡಿಸಿದಾಗ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ:ಭವಾನಿಪುರ ಬೈ ಎಲೆಕ್ಷನ್​: ಬಿಜೆಪಿಯ ಪ್ರಿಯಾಂಕಾ ಶ್ರೀಮಂತೆ, ಸಿಎಂ ಮಮತಾ ಬಡ ಅಭ್ಯರ್ಥಿ!

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಸ್​ಪಿ ಆಶಿಶ್​ ಪ್ರತಾಪ್​ ಸಿಂಗ್​, ಕಿರುಕುಳ ನೀಡುತ್ತಿರುವ ಹಾಗೂ ಅತ್ಯಾಚಾರವೆಸಗಿರುವ ಕುರಿತು ದೂರು ದಾಖಲು ಮಾಡಿಕೊಳ್ಳಲಾಗಿದ್ದು, ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದಿದ್ದಾರೆ.

ABOUT THE AUTHOR

...view details