ಲಖಿಂಪುರ್(ಅಸ್ಸೋಂ):ಲವರ್ನಿಂದ ಹಲ್ಲೆಗೊಳಗಾಗಿದ್ದ ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಅಸ್ಸೋಂನ ಲಖಿಂಪುರ್ದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಆಗಸ್ಟ್ 24ರಂದು ವಿದ್ಯಾರ್ಥಿನಿ ನಂದಿತಾ ಸೈಕಿಯಾ ಮೇಲೆ ಆಕೆಯ ಲವರ್ ರಿಂಟು ಶರ್ಮಾ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನ ಧೇಮಾಜಿ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ತೀವ್ರ ರಕ್ತಸ್ರಾವವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ದಿಬ್ರುಗಢ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.