ಕರ್ನಾಟಕ

karnataka

ETV Bharat / bharat

ಅಮಿತ್​ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಮಿಡಿಯನ್​ ಫಾರೂಕಿಗೆ ಜಾಮೀನು - Supreme Court gave bail to Faruqui

ಹಿಂದೂ ದೇವತೆಗಳು ಮತ್ತು ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಕಳೆದೊಂದು ತಿಂಗಳಿಂದ ಜೈಲಿನಲ್ಲಿದ್ದ ಸ್ಟ್ಯಾಂಡಪ್ ಕಾಮಿಡಿಯನ್ ಮುನಾವರ್ ಫಾರೂಕಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಹಾನ್ಯ ನಟ ಮುನಾವರ್ ಫಾರೂಕಿ
Comedian Munawar Faruqui yet to be released from jail

By

Published : Feb 7, 2021, 11:51 AM IST

ಇಂದೋರ್​:ಹಿಂದೂ ದೇವತೆಗಳು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಆರೋಪದ ಮೇಲೆ ತಿಂಗಳ ಹಿಂದೆ ಬಂಧಿತನಾಗಿದ್ದ ಸ್ಟ್ಯಾಂಡಪ್ ಕಾಮಿಡಿಯನ್ ಮುನಾವರ್ ಫಾರೂಕಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಕರುಣಿಸಿದೆ.

ಈಟಿವಿ ಭಾರತಕ್ಕೆ ಮಾಹಿತಿ ನೀಡಿರುವ ಎಸ್ಪಿ ಜಯವೀರ್ ಭದೌರಿಯಾ

ಮುಂಬೈ ಮೂಲದ ಮುನಾವರ್ ಫಾರುಕಿ ಹೊಸ ವರ್ಷದ ದಿನದಂದು ಇಂದೋರ್‌ನ ಕೆಫೆಯೊಂದರಲ್ಲಿ ನಡೆದ ಹಾಸ್ಯ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಬಗ್ಗೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ನಟನ ವಿರುದ್ಧ ಬಿಜೆಪಿ ಶಾಸಕರೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜ.1 ರಂದು ಫಾರೂಕಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು.

ಈ ಕುರಿತಂತೆ ಈಟಿವಿ ಭಾರತದೊಂದಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಜಯವೀರ್ ಭದೌರಿಯಾ ಮಾಹಿತಿ ನೀಡಿದ್ದು, ಸುಪ್ರಿಂ ಜಾಮೀನು ಮಂಜೂರು ಮಾಡಿದ್ದು, ಫಾರೂಕಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಾರಾಗೃಹದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದರು.

ಓದಿ: ಎಲ್‌ಇಟಿ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಜಾಮೀನುರಹಿತ ವಾರೆಂಟ್​ ಹೊರಡಿಸಿದ ಎನ್​ಐಎ

ಇಂದೋರ್ ನ್ಯಾಯಾಲಯದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಸಲ್ಲಿಸಿದ್ದು, 50,000 ರೂ.ಗಳ ಬಾಂಡ್ ಮತ್ತು ಭದ್ರತೆಯ ಮೇಲೆ ನಟನನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ABOUT THE AUTHOR

...view details