ನವದೆಹಲಿ:ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಮತ್ತೆ ಪರಿಷ್ಕರಿಸಲಾಗಿದೆ. 19 ಕೆ.ಜಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 135 ರೂಪಾಯಿ ಇಳಿಸಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಇಂದಿನಿಂದ 2,219 ರೂಪಾಯಿಗೆ ಮಾರಾಟವಾಗುತ್ತಿದೆ.
ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆ, ಗೃಹ ಬಳಕೆಯಲ್ಲಿ ನೋ ಚೇಂಜ್! - ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ
ಜೂನ್ ತಿಂಗಳ ಆರಂಭದಲ್ಲೇ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಬೆಲೆಯಲ್ಲಿ ದಾಖಲೆಯ 135 ರೂ.ಗೆ ಇಳಿಸಲಾಗಿದೆ.
ಓದಿ:ಗೃಹ, ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ
ಜೂ 1ರ ಬುಧವಾರ 19 ಕೆ.ಜಿಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 135 ರೂ.ಗಳಷ್ಟು ಇಳಿಸಲಾಗಿದೆ. ಈ ಹಿಂದೆ 2,322 ರೂ.ಗಳಷ್ಟಿದ್ದ ಸಿಲಿಂಡರ್ ಈಗ 2,219 ರೂ. ಆಗಿದೆ. ಇದಕ್ಕೂ ಮುನ್ನ ಮೇ 1ರಂದು 19 ಕೆ.ಜಿ ಎಲ್‌ಪಿಜಿಯ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 102.50 ರೂ ಹೆಚ್ಚಿಸಲಾಗಿತ್ತು. ಈಗ ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 2171.50, ಚೆನ್ನೈನಲ್ಲಿ 2,373 ರೂ.ಗೆ ಮಾರಾಟವಾಗುತ್ತಿದೆ. ಆದರೆ ಗೃಹ ಬಳಕೆ ಸಿಲಿಂಡರ್ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಹಿಂದಿನ ದರದಲ್ಲೇ ಮಾರಾಟವಾಗುತ್ತಿದೆ.