ಚೆನ್ನೈ: ರೌಡಿಗಳಿಗೆ ಪ್ರೋತ್ಸಾಹ ನೀಡುವ ಹಾಗೆ ರೌಡಿ ಪಿಕ್ಚರ್ಸ್ಎಂಬ ಹೆಸರಿನಲ್ಲಿ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿರುವ ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಬಂಧಿಸುವಂತೆ ಚೆನ್ನೈ ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಲಾಗಿದೆ. ಸಾಲಿಗ್ರಾಮದ ಕಣ್ಣನ್ ಅವರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ದೂರು ಸಲ್ಲಿಸಿದ್ದಾರೆ.
ರೌಡಿಗಳನ್ನು ಹತ್ತಿಕ್ಕಲು ತಮಿಳುನಾಡು ಪೊಲೀಸರು ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ರೌಡಿ ಪಿಕ್ಚರ್ಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾರೆ. ಈ ಮೂಲಕ ರೌಡಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಕಣ್ಣನ್ ಅವರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.