ಕರ್ನಾಟಕ

karnataka

ETV Bharat / bharat

ಸಂಸತ್ ಭವನದ ಉದ್ಘಾಟನೆ ವಿವಾದ: ಸಿಎಂ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು - etv bharat kannada

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿ ಉಲ್ಲೇಖಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲಾಗಿದೆ.

complaint-filed-against-kejriwal-and-kharge-for-new-parliament-row
ಸಂಸತ್ ಭವನದ ಉದ್ಘಾಟನೆ ವಿವಾದ: ಸಿಎಂ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು

By

Published : May 27, 2023, 4:24 PM IST

ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದ ಬಗ್ಗೆ ವಿವಾದ ಹೆಚ್ಚಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಈಗ ವಿವಾದಕ್ಕೆ ಸಿಲುಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಖರ್ಗೆ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ದೆಹಲಿಯ ಕೊನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಿಎಂ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು

ರಾಜಕೀಯ ಲಾಭಕ್ಕಾಗಿ, ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆ, ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದ ಕುರಿತು ಮಾತನಾಡುವಾಗ ಎರಡು ಸಮುದಾಯಗಳು ಮತ್ತು ಗುಂಪುಗಳ ನಡುವೆ ವೈಷಮ್ಯ ಸೃಷ್ಟಿಸುವ ಹಾಗೂ ಭಾರತ ಸರ್ಕಾರದ ವಿರುದ್ಧ ಅಪನಂಬಿಕೆ ಮೂಡಿಸುವಂತಹ ಬೆದರಿಕೆಯ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ನಾಲ್ಕು ಟ್ವೀಟ್​ಗಳನ್ನು ಮಾಡಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೇವಲ ಚುನಾವಣಾ ಕಾರಣಕ್ಕಾಗಿ ದಲಿತ ಮತ್ತು ಬುಡಕಟ್ಟು ಸಮುದಾಯದವರನ್ನು ರಾಷ್ಟ್ರಪತಿಯನ್ನಾಗಿ ಮಾಡುತ್ತದೆ ಎಂದು ಟೀಕಿಸಿದ್ದರು.

ಇದನ್ನೂ ಓದಿ:ನಾಳೆ ಹೊಸ ಸಂಸತ್​ ಭವನ ಉದ್ಘಾಟನೆ: ದೆಹಲಿ ನಗರ ಸಂಚಾರ ಬದಲು

ಸಂಸತ್ ಭವನದ ಶಂಕುಸ್ಥಾಪನೆ ನೆರವೇರಿಸುವಾಗ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಹ್ವಾನಿಸಿರಲಿಲ್ಲ. ಈಗ ಉದ್ಘಾಟನಾ ಕಾರ್ಯಕ್ರಮಕ್ಕೆ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿಲ್ಲ. ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಪ್ರಥಮ ಪ್ರಜೆ. ಅವರು ಮಾತ್ರ ಸರ್ಕಾರ ಮತ್ತು ವಿರೋಧ ಪಕ್ಷ ಸೇರಿದಂತೆ ಪ್ರತಿಯೊಬ್ಬ ಪ್ರಜೆಯನ್ನು ಪ್ರತಿನಿಧಿಸುತ್ತಾರೆ. ಹೊಸ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಿದ್ದರೆ, ಅದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸರ್ಕಾರದ ಬದ್ಧತೆಯ ಸಂಕೇತವಾಗುತ್ತಿತ್ತು ಎಂದಿದ್ದರು.

ಮೋದಿ ಸರ್ಕಾರವು ಎಸ್ಸಿ ಮತ್ತು ಎಸ್ಟಿಗಳನ್ನು ಅವಮಾನಿಸುತ್ತದೆ ಎಂದಿದ್ದ ಕೇಜ್ರಿವಾಲ್:ಇದೇ ವೇಳೆ, ಟ್ವೀಟ್ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅವರು ದಲಿತ ಸಮುದಾಯವನ್ನು ಅಶುಭ ಎಂದು ಪರಿಗಣಿಸುತ್ತೀರಾ? ಎಂದು ಪ್ರಶ್ನಿಸಿ, ಅದಕ್ಕಾಗಿಯೇ ಅವರು ಆಹ್ವಾನ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಎಸ್ಸಿ ಮತ್ತು ಎಸ್ಟಿಗಳನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿದ್ದ ಕೇಜ್ರಿವಾಲ್, ಆಗಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ರಾಮ ಮಂದಿರದ ಶಂಕುಸ್ಥಾಪನೆಗೆ ಆಹ್ವಾನಿಸಿರಲಿಲ್ಲ ಎಂದು ಟ್ವೀಟ್ ಮಾಡಿದ್ದರು. ಹೊಸ ಸಂಸತ್ ಭವನದ ಶಂಕುಸ್ಥಾಪನೆ ಸಮಾರಂಭಕ್ಕೂ ಅವರನ್ನು ಆಹ್ವಾನಿಸಿರಲಿಲ್ಲ. ನೂತನ ಸಂಸತ್ ಭವನವನ್ನು ಹಾಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ಇದನ್ನೂ ಓದಿ:ನೂತನ ಸಂಸತ್ ಕಟ್ಟಡದ ಉದ್ಘಾಟನೆಗೆ ಕ್ಷಣಗಣನೆ: ಭವ್ಯ ಭವನದ ಸೊಗಸು ಹೀಗಿದೆ!

ABOUT THE AUTHOR

...view details