ನವದೆಹಲಿ: ಮುಂದಿನ ನಾಲ್ಕೈದು ದಿನಗಳು ದೇಶದ ಇತರೆ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆ ನೀಡಿದೆ. ನೈರುತ್ಯ ಮಾನ್ಸೂನ್ ಮಾರುತಗಳ ಚಲನವಲನಗಳ ಗಮನವಿಟ್ಟಿರುವ ಅವರು ಮಾರುತಗಳ ಪ್ರವೇಶ ವೇಗಗೊಳ್ಳುತ್ತಿದ್ದು, ಮುಂದಿನ ಎರಡು ದಿನಗಳ ಪರಿಸ್ಥಿತಿ ಅನುಕೂಲವಾಗಿದೆ ಎಂದು ಹೇಳಿದೆ.
ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಬಿಹಾರ ಸೇರಿ ಈ ಎಲ್ಲ ರಾಜ್ಯದ ಕೆಲ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.
ಮುಂದಿನ 3-4 ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುತ್ತಿವೆ. ಅಷ್ಟೇ ಅಲ್ಲ ಮುಂದಿನ ಐದು ದಿನಗಳಲ್ಲಿ ಪೂರ್ವ-ಮಧ್ಯ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ಶುಕ್ರವಾರ ಹೊರಡಿಸಿದ ಹೇಳಿಕೆಯಲ್ಲಿ ಜೂನ್ 23 ರಿಂದ 26 ರ ಅವಧಿಯಲ್ಲಿ ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 23 ರಂದು ಅರುಣಾಚಲ ಪ್ರದೇಶ ಮತ್ತು ಬಿಹಾರದಲ್ಲಿ, ಜೂನ್ 23, 26 ಮತ್ತು 27 ರಂದು ಅಸ್ಸೋಂ ಮತ್ತು ಮೇಘಾಲಯದಲ್ಲಿ, ಜೂನ್ 23 ರಿಂದ 27 ರವರೆಗೆ ನಾಗಾಲ್ಯಾಂಡ್, ಮಣಿಪುರ ಮತ್ತು ಮಿಜೋರಾಂದಲ್ಲಿ, ಜೂನ್ 23 ಮತ್ತು 26 ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ, ಜೂನ್ 25 ಮತ್ತು 26 ರಂದು ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಇಲಾಖೆ ತಿಳಿಸಿದೆ.