ನವದೆಹಲಿ: ಕೋವಿಡ್-19 ಉಲ್ಬಣಗೊಂಡ ಸಂದರ್ಭದಲ್ಲಿ ದೇಶದಲ್ಲಿ ಆಮ್ಲಜನಕದ ಕೊರತೆ ಉಂಟಾಗಿತ್ತು. ಆದರೆ, ಈ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಸಂಸತ್ನಲ್ಲಿ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್, ಕೆ ಸಿ ವೇಣುಗೋಪಾಲ್ ನೇತೃತ್ವದಲ್ಲಿ ಹಕ್ಕುಚ್ಯುತಿ ಮಂಡಿಸಲು ನಿರ್ಣಯಿಸಿದೆ.
ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಜೀವ ಉಳಿಸುವ ಅನಿಲದ ಕೊರತೆಯಿಂದಾಗಿ ಜನರು ಪರದಾಡಿದ್ದಾರೆ. ಹಲವಾರು ಆಸ್ಪತ್ರೆಗಳಲ್ಲಿ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ. ಆದರೆ, ರಾಜ್ಯಸಭೆಯಲ್ಲಿ ಆರೋಗ್ಯ ಸಚಿವರು ತಪ್ಪು ಹೇಳಿಕೆ ನೀಡಿ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಕೆ.ಸಿ ವೇಣುಗೋಪಾಲ್ ಹೇಳಿದರು.