ಕರ್ನಾಟಕ

karnataka

ETV Bharat / bharat

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ನೇಮಕ.. - ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ..

By

Published : Jul 18, 2021, 10:25 PM IST

ನವದೆಹಲಿ: ಮಾಜಿ ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಪಿಸಿಸಿ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಜೊತೆಗೆ ಸಂಗತ್ ಸಿಂಗ್ ಗಿಲ್ಜಿಯಾನ್, ಸುಖ್ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್ ಮತ್ತು ಕುಲ್ಜಿತ್ ಸಿಂಗ್ ನಾಗ್ರಾ ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಈ ಮೊದಲು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದ ಸುನಿಲ್ ಜಖರ್ ಅವರ ಕೊಡುಗೆಗಳನ್ನು ಪಕ್ಷವು ಪ್ರಶಂಸಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

ABOUT THE AUTHOR

...view details