ನವದೆಹಲಿ: ನಾಗಾಲ್ಯಾಂಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಕಾಂಗ್ರೆಸ್ ನಿಯೋಗ ಗುರುವಾರ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವರದಿ ಸಲ್ಲಿಸಿದೆ.
ನಿಯೋಗದ ಸದಸ್ಯರಾದ ಜಿತೇಂದ್ರ ಸಿಂಗ್ (ಎಐಸಿಸಿ ಪ್ರಧಾನ ಕಾರ್ಯದರ್ಶಿ), ಗೌರವ್ ಗೊಗೊಯ್ (ಸಂಸದ) ಮತ್ತು ಅಜೋಯ್ ಕುಮಾರ್ (ಕಾಂಗ್ರೆಸ್ ಉಸ್ತುವಾರಿ) ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ವರದಿ ನೀಡಿದೆ.
ವರದಿ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಜೋಯ್ ಕುಮಾರ್, ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಆ ಘಟನೆ ಬಗ್ಗೆ ಗುರುತು ಸಿಗದೆ ಇದ್ದುದ್ದರಿಂದ ಈ ರೀತಿ ಸೈನಿಕರು ಮಾಡಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ.
ಆದರೆ, ಪ್ರತ್ಯಕ್ಷದರ್ಶಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಫೈರಿಂಗ್ ಮಾಡುವ ಮೊದಲು ಎಚ್ಚರಿಕೆ ನೀಡಿರಲಿಲ್ಲ ಎಂದಿದ್ದಾರೆ ಎಂಬ ಬಗ್ಗೆ ತಿಳಿಸಿದ್ದಾರೆ ಎಂದು ವಿವರಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಘಟನೆಯ ನಂತರ ಗೃಹ ಸಚಿವರು ಜೈಪುರದಲ್ಲಿ ಕಾರ್ಯಕ್ರಮಕ್ಕೆ ಹೋಗಿದ್ದರು. ಆದರೂ ಅವರು ಸ್ಥಳಕ್ಕೆ ಭೇಟಿ ನೀಡಿಲ್ಲ, ಈ ಹಿನ್ನೆಲೆ ನಾವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ ಎಂದಿದ್ದಾರೆ.