ಕರ್ನಾಟಕ

karnataka

ETV Bharat / bharat

ಮಹಿಳಾ ಮೀಸಲಾತಿ ಪರ ಕಾಂಗ್ರೆಸ್​ ಬ್ಯಾಟಿಂಗ್​.. ವಿಶೇಷ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಕೇಂದ್ರಕ್ಕೆ ಆಗ್ರಹ - Womens Reservation Bill

ಲೋಕಸಭೆ ಚುನಾವಣೆ ಹಿನ್ನೆಲೆ ಮಹತ್ವ ಪಡೆದುಕೊಂಡಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಿ ಎಂದು ಕಾಂಗ್ರೆಸ್​​ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮಹಿಳಾ ಮೀಸಲಾತಿ ಪರ ಕಾಂಗ್ರೆಸ್​ ಬ್ಯಾಟಿಂಗ್
ಮಹಿಳಾ ಮೀಸಲಾತಿ ಪರ ಕಾಂಗ್ರೆಸ್​ ಬ್ಯಾಟಿಂಗ್

By ETV Bharat Karnataka Team

Published : Sep 18, 2023, 4:23 PM IST

ನವದೆಹಲಿ:ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಬೇಕು ಎಂದು ಕಾಂಗ್ರೆಸ್​ ಒತ್ತಾಯಿಸಿದೆ. ಈ ಮೀಸಲಾತಿ ಕಾಂಗ್ರೆಸ್​ನ ಕೂಸು, ಬಿಜೆಪಿಯವರಿಗೆ ಮಹಿಳೆಯವರ ಮೇಲೆ ಗೌರವ ಇದ್ದರೆ ಕಾಯ್ದೆಯನ್ನು ಸಂಸತ್ತಿನಲ್ಲಿ ಅಂಗೀಕಾರ ಪಡೆದುಕೊಳ್ಳಲಿ ಎಂದು ಆಗ್ರಹಿಸಿದೆ.

ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆಯಬೇಕು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಲವಾರು ಸಂದರ್ಭಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಿದ್ದರೂ ಲೋಕಸಭೆಯಲ್ಲಿ ಇಲ್ಲಿಯವರೆಗೆ ಅಂಗೀಕಾರವಾಗಿಲ್ಲ ಎಂದರು.

ಮಹಿಳಾ ಮೀಸಲಾತಿ ಮಸೂದೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ದೇಶದ ಪರವಾಗಿ ಮನವಿ ಮಾಡುತ್ತೇವೆ. ಸರ್ಕಾರ ಇದನ್ನು ಪರಿಗಣಿಸಿ ಮಸೂದೆಯನ್ನು ಮಂಡಿಸಲಿದೆ ಎಂದು ಪಕ್ಷ ಭಾವಿಸುತ್ತದೆ ಎಂದರು.

ಕೇಂದ್ರ ಇಚ್ಚಾಶಕ್ತಿ ಪ್ರದರ್ಶಿಸಲಿ:ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು, ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಯುಪಿಎ ಕಲ್ಪನೆಯ ಕೂಸಾಗಿದೆ. ನಮ್ಮ ಸರ್ಕಾರವಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50 ಪ್ರತಿಶತ ಮೀಸಲಾತಿ ನೀಡಿದ್ದೇವೆ. ನಾವು ಸಂಪೂರ್ಣವಾಗಿ ಮಹಿಳಾ ಮೀಸಲಾತಿ ಪರ ಇದ್ದೇವೆ. ಕೇಂದ್ರ ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ, ಇದೇ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಹೇಳಿದರು.

ಸಿಡಬ್ಲ್ಯೂಸಿಯಲ್ಲಿ ಮಸೂದೆ ಪರ ನಿರ್ಣಯ:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ತೆಲಂಗಾಣದಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ಕಾಳ ನಡೆಯುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಪರವಾಗಿ ಕಾಂಗ್ರೆಸ್​ ನಿಲ್ಲಲಿದೆ ಎಂಬ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 2008 ರಲ್ಲಿ ಸಂವಿಧಾನಕ್ಕೆ 108 ನೇ ತಿದ್ದುಪಡಿ ತಂದು ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಮುಂದಾಗಿತ್ತು. ಇದನ್ನು 2010 ರಲ್ಲಿ ರಾಜ್ಯಸಭೆಯು ಅಂಗೀಕರಿಸಿತು. ಆದರೆ ಲೋಕಸಭೆಯಲ್ಲಿ ಮಸೂದೆಗೆ ಒಪ್ಪಿಗೆ ಸಿಗಲಿಲ್ಲ. 2014 ರಲ್ಲಿ ಸರ್ಕಾರ ಬದಲಾದ ಬಳಿಕ ಈ ಮಸೂದೆ ಮೂಲೆಗುಂಪಾಗಿತ್ತು.

ಇದನ್ನೂ ಓದಿ:ಅಧಿವೇಶನ ಕೆಲವೇ ದಿನ ನಡೆಯಬಹುದು, ಆದ್ರೆ ಐತಿಹಾಸಿಕ ವ್ಯಾಪ್ತಿ ಹೊಂದಿದೆ: ಮೋದಿ

ABOUT THE AUTHOR

...view details