ಕರ್ನಾಟಕ

karnataka

ETV Bharat / bharat

ಜಾತಿಗಣತಿಗೆ ಸಂಬಂಧಿಸಿದ ವಿಷಯಗಳ ಅಧ್ಯಯನಕ್ಕಾಗಿ ಸಮಿತಿ ರಚಿಸಿದ ಕಾಂಗ್ರೆಸ್

ಜಾತಿ ಗಣತಿಗೆ ಸಂಬಂಧಿಸಿದ ವಿಷಯಗಳನ್ನು ಅಧ್ಯಯನ ಮಾಡುವ ಸಲುವಾಗಿ ಕಾಂಗ್ರೆಸ್, ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಸಮಿತಿ ರಚಿಸಿದೆ.

ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

By

Published : Sep 4, 2021, 9:28 AM IST

ನವದೆಹಲಿ: ಜಾತಿ ಗಣತಿಗೆ ಸಂಬಂಧಿಸಿದ ವಿಷಯಗಳನ್ನು ಅಧ್ಯಯನ ಮಾಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಏಳು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಸಮಿತಿಯ ನೇತೃತ್ವವನ್ನು ಕರ್ನಾಟಕದ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿಯವರಿಗೆ ವಹಿಸಲಾಗಿದೆ.

ಪಶ್ಚಿಮ ಬಂಗಾಳದ ಸಂಸದ ಅಭಿಷೇಕ್ ಮನು ಸಿಂಘ್ವಿ, ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ಕಾಂಗ್ರೆಸ್ ವಕ್ತಾರ ಮೋಹನ್ ಪ್ರಕಾಶ್, ಹರಿಯಾಣದ ಶಾಸಕ ಕುಲದೀಪ್ ಬಿಷ್ಣೋಯ್, ಆರ್​ಪಿಎನ್​ ಸಿಂಗ್ ಮತ್ತು ಪಿ.ಎಲ್. ಪುನಿಯಾ ಈ ಸಮಿತಿಯಲ್ಲಿದ್ದಾರೆ.

ಇದನ್ನೂ ಓದಿ: ಸೆ.25ರಂದು 'ಭಾರತ್ ಬಂದ್'ಗೆ ರೈತರ ಕರೆ : ಬೆಂಬಲ ಸೂಚಿಸಿದ ಎಡಪಕ್ಷಗಳು

ಈ ಹಿಂದೆ ಲೋಕಸಭೆಯಲ್ಲಿ ಹಲವಾರು ಪ್ರತಿಪಕ್ಷದ ಸದಸ್ಯರು ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿದ್ದರು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಪಟ್ಟಿಯನ್ನು ತಯಾರಿಸಲು ಮತ್ತು ನಿರ್ವಹಿಸಲು ಜಾತಿಗಣತಿ ಅನುಕೂಲವಾಗಲಿದೆ.

ABOUT THE AUTHOR

...view details