ನವದೆಹಲಿ : ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸೋಲಿನ ವಿಶ್ಲೇಷಣೆಗಾಗಿ ಗ್ರೂಪ್- 23ರ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಚುನಾವಣೆಗಳಲ್ಲಿ ಪಕ್ಷದ ಸತತ ಸೋಲಿನ ಬಗ್ಗೆ ಕಳವಳ ವ್ಯಕ್ತವಾಯಿತು.
ಮೂಲಗಳ ಪ್ರಕಾರ ಈ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ನಾಯಕರು ಮುಂದಿನ ಕಾರ್ಯಕಾರಿ ಸಮಿತಿಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಕೆಲವು ಮುಖ್ಯಮಂತ್ರಿಗಳು, ಯುವ ಕಾಂಗ್ರೆಸ್ ಮುಖಂಡರು ಕೇವಲ ಗಾಂಧಿ ಕುಟುಂಬದ ಪರವಾಗಿರುವ ಕಾರಣದಿಂದ ತಾವು ಕಾರ್ಯಕಾರಿ ಸಮಿತಿಯಿಂದ ಹೊರಗೆ ಉಳಿಯುವುದಾಗಿ ಹೇಳಿದ್ದಾರೆ. ಯಾವುದೇ ಗಂಭೀರ ವಿಚಾರವನ್ನ ಸಭೆಯಲ್ಲಿ ಚರ್ಚಿಸಿಲ್ಲ ಎಂದು ತಿಳಿದು ಬಂದಿದೆ.