ಲಖನೌ(ಉತ್ತರಪ್ರದೇಶ): ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಮುಖಂಡರು ಜಿಪಿಒದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕುಳಿತು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಎಂಟು ಜನರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಅವರನ್ನು ಶನಿವಾರ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನ್ಯಾಯ ಸಮ್ಮತ ತನಿಖೆ ದೃಷ್ಟಿಯಿಂದ ಸಚಿವಸ್ಥಾನದಿಂದ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ವಕ್ತಾರರು ಒತ್ತಾಯಿಸುತ್ತಿದ್ದಾರೆ.
ಯಾರ ಒತ್ತಡಕ್ಕೂ ನಾವು ಮಣಿಯುವುದಿಲ್ಲ.. ಆರೋಪಿಗಳ ವಿರುದ್ಧ ಕ್ರಮ