ನವದೆಹಲಿ:ಮೇ 20ರಂದು ನಡೆಯಲಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಗುರುವಾರ ಆಹ್ವಾನಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಘಟಾನುಘಟಿ ನಾಯಕರು ಯಾರು?: ಇತ್ತೀಚೆಗೆ ಮುಂಬೈನಲ್ಲಿ ಮಹಾರಾಷ್ಟ್ರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಉಪನಾಯಕ ತೇಜಸ್ವಿ ಯಾದವ್ ಅವರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಹೇಮಂತ್ ಸೋರೆನ್, ಸೀತಾರಾಮ್ ಯೆಚೂರಿ, ಉದ್ಧವ್ ಠಾಕ್ರೆ, ಶರದ್ ಪವಾರ್, ಮತ್ತು ಫಾರೂಕ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಸಮಾನ ಮನಸ್ಕ ವಿರೋಧ ಪಕ್ಷಗಳು ಮತ್ತು ಅವರ ನಾಯಕರಿಗೂ ಆಹ್ವಾನವನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿದೆ.
ರಾಜ್ಯಪಾಲರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರು:ಈ ಸಂದರ್ಭದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಗಾಂಧಿ ಕುಟುಂಬ ಕೂಡ ಉಪಸ್ಥಿತರಿರುವರು. ಹಿಮಾಚಲ ಸಿಎಂ ಸುಖವಿಂದರ್ ಸಿಂಗ್ ಸುಖು, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಕರ್ನಾಟಕಕ್ಕೆ ಮುಖ್ಯಮಂತ್ರಿ ಆಯ್ಕೆಯ ಘೋಷಣೆಯಾದ ಬೆನ್ನಲ್ಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಗುರುವಾರ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಗುರುವಾರ ರಾಜ್ಯಪಾಲರನ್ನು ಕಾಂಗ್ರೆಸ್ ಮಾಡಿದರು ಎಂದು ಮೂಲಗಳು ತಿಳಿಸಿವೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭ:ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ರಾಜಭವನದ ಮೂಲಗಳು ತಿಳಿಸಿದ್ದು, ಇದಕ್ಕಾಗಿ ಕಾಂಗ್ರೆಸ್ ಶಾಸಕ ಜಿ ಪರಮೇಶ್ವರ ಅವರು ಪಕ್ಷದ ಪ್ರತಿನಿಧಿಯಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಮಾತನಾಡಿದರು. ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ ಸಿದ್ದರಾಮಯ್ಯ, ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕದ ಕುರಿತು ಚರ್ಚಿಸಿದರು. ಸಿದ್ದರಾಮಯ್ಯ ಅವರು ಇಂದು ಸಂಜೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಮೂಲಗಳು ತಿಳಿಸಿವೆ.