ಚಂಡೀಗಢ (ಪಂಜಾಬ್): ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ತೆರವುಗೊಂಡಿದ್ದ ಪಂಜಾಬ್ ಮುಖ್ಯಮಂತ್ರಿ ಸ್ಥಾನವನ್ನು ಸಚಿವರಾಗಿದ್ದ ಚರಣಜಿತ್ ಸಿಂಗ್ ಚನ್ನಿ (58) ತುಂಬಲಿದ್ದಾರೆ.
ಇಂದು ನಡೆದ ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ವಿಚಾರವನ್ನು ಟ್ವೀಟ್ ಮಾಡುವ ಮೂಲಕ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳಿಂದ ಪಂಜಾಬ್ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಿದೆ. ಇದ್ದಕ್ಕಿದ್ದಂತೆ ನಿನ್ನೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನಿಲ್ ಜಖರ್, ಪಕ್ಷದ ಪ್ರಸ್ತುತ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಸುಖಜಿಂದರ್ ಸಿಂಗ್ ರಾಂಧವ ಅವರ ಹೆಸರು ನೂತನ ಸಿಎಲ್‌ಪಿ ನಾಯಕನ ರೇಸ್ನಲ್ಲಿ ಮುಂಚೂಣಿಯಲ್ಲಿತ್ತು.