ಕರ್ನಾಟಕ

karnataka

ETV Bharat / bharat

ಹಿಮಾಚಲ ಬಜೆಟ್ ಅಧಿವೇಶನದನಲ್ಲಿ ಗದ್ದಲ: ಐವರು ಕಾಂಗ್ರೆಸ್ ಸದಸ್ಯರು ಅಮಾನತು - ವಿಪಕ್ಷ ನಾಯಕ ಮುಕೇಶ್ ಅಗ್ನಿಹೋತ್ರಿ

ಹಿಮಾಚಲ ಪ್ರದೇಶದ ಬಜೆಟ್ ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಐವರು ಕಾಂಗ್ರೆಸ್ ಸದಸ್ಯರನ್ನು ಅಧಿವೇಶನ ಮುಗಿಯುವರೆಗೆ ಅಮಾನತು ಮಾಡಿ ವಿಧಾನಸಭಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

budget session
ಹಿಮಾಚಲ ಬಜೆಟ್ ಅಧಿವೇಶನ

By

Published : Feb 26, 2021, 2:24 PM IST

ಶಿಮ್ಲಾ, ಹಿಮಾಚಲ ಪ್ರದೇಶ: ಬಜೆಟ್ ಅಧಿವೇಶನ ನಡೆಯುತ್ತಿರಬೇಕಾದರೆ ಕಾಂಗ್ರೆಸ್ ಸದಸ್ಯರು ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ವಿಪಕ್ಷ ನಾಯಕ ಮುಕೇಶ್ ಅಗ್ನಿಹೋತ್ರಿ ಸೇರಿದಂತೆ ಐವರು ಕಾಂಗ್ರೆಸ್​​ ಶಾಸಕರನ್ನು ವಿಧಾನಸಭಾಧ್ಯಕ್ಷರು ಅಮಾನತು ಮಾಡಿದ್ದಾರೆ.

ವಿಪಕ್ಷ ನಾಯಕ ಮುಕೇಶ್ ಅಗ್ನಿಹೋತ್ರಿ, ಹರ್ಷವರ್ಧನ್, ಸತ್ಪಾಲ್ ರಾಯಜಾದಾ, ವಿನಯ್ ಕುಮಾರ್ ಮತ್ತು ಸುಂದರ್ ಠಾಕೂರ್ ಅವರನ್ನು ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿ ವಿಧಾನಸಭಾಧ್ಯಕ್ಷರು ಆದೇಶಿಸಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ.. ಆಟೋರಿಕ್ಷಾಗೆ ಹಗ್ಗ ಕಟ್ಟಿ ಎಳೆದು ಸಂಸದ ಶಶಿ ತರೂರ್​ ಅಣುಕು..

ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು ಭಾಷಣ ಮಾಡಿದ್ದು, ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತರು ಭಾಷಣದ ಪ್ರತಿಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಜೊತೆಗೆ ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ ಎಂದು ಆರೋಪಿಸಿದ್ದರು.

ಗದ್ದಲ ಮುಂದುವರೆದಂತೆ ರಾಜ್ಯಪಾಲರು ಭಾಷಣ ಮೊಟಕುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಐವರು ಕಾಂಗ್ರೆಸ್ ಸದಸ್ಯರನ್ನು ವಿಧಾನಸಭಾಧ್ಯಕ್ಷರು ಸಂಪೂರ್ಣ ಅಧಿವೇಶನದವರೆಗೆ ಅಮಾನತ್ತಿನಲ್ಲಿಟ್ಟಿದ್ದಾರೆ.

ABOUT THE AUTHOR

...view details