ನವದೆಹಲಿ: ಇತ್ತೀಚೆಗೆ ರಾಜ್ಯದಲ್ಲಿ ಕಾಂಗ್ರೆಸ್ ಆರಂಭಿಸಿರುವ ಮೇಕೆದಾಟು ಪಾದಯಾತ್ರೆಗೆ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಕ್ಷದ ಹಿರಿಯ ಮುಖಂಡ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಂಕು ತಗುಲಿದ್ದು, ರೋಗಲಕ್ಷಣರಹಿತರಾಗಿದ್ದಾರೆ. ಸದ್ಯ ಹೋಮ್ ಐಸೋಲೇಷನ್ಗೆ ಒಳಗಾಗಿದ್ದಾರೆ. ಕೋಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದು, ಬೂಸ್ಟರ್ ಡೋಸ್‌ಗೆ ಇನ್ನೂ ಅರ್ಹರಾಗಿರಲಿಲ್ಲ ಎಂದು ಖರ್ಗೆ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯ್ಲಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ ಸಂಜೆ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದ್ದು, ಅವರಿಗೆ ಕೆಮ್ಮು ಮತ್ತು ಜ್ವರ ಇದೆ. ''ನಾನು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದರಿಂದ, ಭಾರಿ ಪರಿಣಾಮ ಎದುರಿಸುವುದನ್ನು ತಪ್ಪಿಸಿದಂತಾಗಿದೆ. ಸದ್ಯ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ'' ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ದೇಶ ವಿಭಜನೆಯ ವೇಳೆ ಬೇರ್ಪಟ್ಟ ಸಹೋದರರು.. 74 ವರ್ಷದ ಬಳಿಕ ಒಂದಾದ ಅಣ್ಣ - ತಮ್ಮ !
ಮಲ್ಲಿಕಾರ್ಜುನ ಖರ್ಗೆ ಮತ್ತು ವೀರಪ್ಪ ಮೊಯ್ಲಿ ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಯ ಉದ್ಘಾಟನಾ ವೇಳೆ ಭಾಗಿಯಾಗಿದ್ದರು.