ಮುಂಬೈ(ಮಹಾರಾಷ್ಟ್ರ):ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮಹಾರಾಷ್ಟ್ರ ಕಾಂಗ್ರೆಸ್ನಲ್ಲಿ ಸಂಚಲನ ಉಂಟಾಗಿದೆ. ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, "ನನ್ನ ರಾಜಕೀಯ ಜೀವನದ ಮಹತ್ವದ ಘಟ್ಟವೊಂದು ಇಂದು ಮುಕ್ತಾಯವಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷದ ಜೊತೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಅಂತ್ಯಗೊಳಿಸಿದ್ದೇನೆ. ಇಷ್ಟು ವರ್ಷ ಬೆಂಬಲಿಸಿದ ಅಭಿಮಾನಿಗಳು, ಕಾರ್ಯಕರ್ತರು ಮತ್ತು ಸಹೋದ್ಯೋಗಿಗಳಿಗೆ ಕೃತಜ್ಞನಾಗಿದ್ದೇನೆ." ಎಂದು ಬರೆದುಕೊಂಡಿದ್ದಾರೆ.
ಕೈ ಬಿಟ್ಟು ಶಿಂಧೆ ನೇತೃತ್ವದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗುವುದನ್ನು ಶನಿವಾರವಷ್ಟೇ ಮಿಲಿಂದ್ ಅವರು ಅಲ್ಲಗಳೆದಿದ್ದರು. ಆದ್ರೆ ಇಂದು ಪಕ್ಷವನ್ನು ತ್ಯಜಿಸಿರುವ ಬಗ್ಗೆ ಅಧಿಕೃತವಾಗಿ ಅವರೇ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ಇಂದು ಮಣಿಪುರದಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಳ್ಳಲಿದ್ದು, ಇದೇ ದಿನ ಮಿಲಿಂದ್ ಅವರು ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ.