ನವದೆಹಲಿ:ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ಕುರಿತು ನೀಡಿದ ಹೇಳಿಕೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಮೇಶ್ ಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ 'ರಮೇಶ್ಕುಮಾರ್ ಅವರು ನೀಡಿದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ರಮೇಶ್ಕುಮಾರ್ ಹೇಳಿರುವ ಪದಗಳನ್ನು ವಿವರಿಸಲು ಸಾಧ್ಯವಿಲ್ಲ. ಅವುಗಳನ್ನು ಸಮರ್ಥನೆ ಮಾಡಿಕೊಳ್ಳಲೂ ಸಾಧ್ಯವಾಗುವುದಿಲ್ಲ. ಅತ್ಯಾಚಾರ ಘೋರ ಅಪರಾಧ. ಪೂರ್ಣ ವಿರಾಮ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.